ವಿವೇಕಾನಂದ ಕಾಲೇಜಿನಲ್ಲಿ ವಾರ್ಷಿಕೋತ್ಸವ
ಪುತ್ತೂರು: ಪ್ರಸ್ತುತಕಾಲಘಟ್ಟದಲ್ಲಿ ಹೊಸ ವಿನ್ಯಾಸ, ತಂತ್ರಜ್ಞಾನ ಹಾಗೂ ಕಲೆಗೆ ಭರಪೂರವಾದ ಅವಕಾಶಗಳು ಯುವಜನಾಂಗದ ಮುಂದಿದೆ. ಆದರೆ ವಿದ್ಯಾರ್ಥಿಗಳು ಇದನ್ನು ಹೇಗೆ ಬಳಸಿಕೊಳ್ಳುತ್ತೇವೆ ಎಂಬುದು ಮುಖ್ಯ. ರಾಷ್ಟ್ರೀಯ ಶಿಕ್ಷಣ ಪದ್ಧತಿಯಿಂದ ಇಂದು ವಿದ್ಯಾರ್ಥಿಗಳಿಗೆ ಅವಕಾಶಗಳು ವಿಸ್ತಾರವಾಗಿದೆ. ಮುಖ್ಯವಾಗಿ ಸಂಶೋಧನೆಯಲ್ಲಿ ತೊಡಗಿಕೊಂಡಲ್ಲಿ ಯಶಸ್ಸು ಗಳಿಸಬಹುದು ಎಂದು ಬೆಂಗಳೂರಿನ ಚಾಣಕ್ಯ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಯಶವಂತಡೊಂಗ್ರೆ ಹೇಳಿದರು.
ಇವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ಕಾಲೇಜಿನ ವಾರ್ಷಿಕೋತ್ಸವ ಆಶ್ರಯದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ವಿಶ್ವದ ಯಾವುದೇ ಭಾಗಕ್ಕೆ ಹೋದರೆ ಅಲ್ಲಿನ ಮಾಹಿತಿ ಪಡೆಯುವ ಅವಕಾಶ ತಂತ್ರಜ್ಞಾನದಿಂದ ಲಭಿಸುತ್ತದೆ. ಶಿಕ್ಷಣಕ್ಕೆ ಸಂಬಂಧಿಸಿದ ಅನೇಕ ವಿಚಾರಗಳು ತಂತ್ರಜ್ಞಾನದ ಮೂಲಕ ವಿದ್ಯಾರ್ಥಿಗಳಿಗೆ ಇಂದು ದೊರಕುತಿದೆ. ಆದ್ದರಿಂದ ನಿಮ್ಮನ್ನು ನೀವು ಹೊಸ ಜಗತ್ತಿನ ಹೊಸ ಸಾಧ್ಯತೆಗೆ ತೆರೆದುಕೊಳ್ಳಬೇಕು ಎಂದು ನುಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್‍ಕಲ್ಲಡ್ಕ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಶ್ರದ್ಧೆ,ಸಹನೆ, ಸತತ ಪ್ರಯತ್ನವಿದ್ದರೆ ಯಶಸ್ಸು ಗಳಿಸಬಹುದು. ಅದರೊಂದಿಗೆ ಆತ್ಮವಿಶ್ವಾಸ ಹೊಂದಿದ್ದರೆ ನಮ್ಮ ಕಾರ್ಯದಲ್ಲಿ ಜಯಗಳಿಸಬಹುದು.ರಾಷ್ಟ್ರೀಯ ಶಿಕ್ಷಣ ನೀತಿ ಪದ್ಧತಿಯು ಈ ಮಣ್ಣಿನಚಿಂತನೆಯ ಶಿಕ್ಷಣವನ್ನು ವಿದ್ಯಾರ್ಥಿಗಳ ಮುಂದಿಡುತ್ತದೆ. ಹಾಗಾಗಿ ನಮ್ಮ ಚಿಂತನೆಗಳು ಬದಲಾಗಬೇಕು ಅದು ಭಾರತಕ್ಕೆ ಹೊಂದಿಕೆಯಾಗುವಂತಿರಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ವಿವಿಧಕ್ಷೇತ್ರದಲ್ಲಿ ಸಾಧನೆ ಮಾಡಿದ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರನ್ನುಗೌರವಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಪರೀಕ್ಷಾಂಗ ಕುಲಸಚಿವ ಡಾ.ಶ್ರೀಧರ ಎಚ್. ಜಿ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿಕಾಲೇಜಿನ ಪದವಿ ಪತ್ರಿಕೋದ್ಯಮ ವಿಭಾಗದ 'ವಿಕಸನ' ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು.
ವೇದಿಕೆಯಲ್ಲಿ ಕಾಲೇಜಿನ ಆಡತ ಮಂಡಳಿಯ ಅಧ್ಯಕ್ಷ ಡಾ.ಶ್ರೀಪತಿ ಕಲ್ಲೂರಾಯ, ಸಂಚಾಲಕ ಮುರಳಿಕೃಷ್ಣ ಕೆ. ಎನ್, ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣುಗಣಪತಿ ಭಟ್ ಹಾಗೂ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಐಕ್ಯೂಎಸಿ ಘಟಕದ ಸಂಯೋಜಕ ಪ್ರೊ. ಶಿವಪ್ರಸಾದ್ ಕೆ.ಎಸ್ ಸ್ವಾಗತಿಸಿ, ಕಾಲೇಜಿನ ಪರೀಕ್ಷಾಂಗ ಕುಲ ಸಚಿವಡಾ. ಹೆಚ್ ಜಿ ಶ್ರೀಧರ್ ವಂದಿಸಿದರು, ಸ್ನಾತಕೋತ್ತರ ವಿಭಾಗದಡೀನ್ ಡಾ. ವಿಜಯ ಸರಸ್ವತಿ ಮತ್ತು ವ್ಯವಹಾರಶಾಸ್ತ್ರ ವಿಭಾಗದ ಮುಖ್ಯಸ್ಥೆರೇಖಾ ನಿರ್ವಹಿಸಿದರು.
ಸಭಾಕಾರ್ಯಕ್ರಮದ ನಂತರ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ