ಉಜಿರೆ: ಉಜಿರೆಯ ಎಸ್‌ಡಿಎಂ ಸ್ವಾಯತ್ತ ಮಹಾ ವಿದ್ಯಾಲಯದಲ್ಲಿ ವಿಜ್ಞಾನ ಸಿಂಚನ ಅಂತರ ಕಾಲೇಜು ವಿಜ್ಞಾನ ಮೇಳ ಮತ್ತು ಸ್ಪರ್ಧೆಗಳು ಜರಗಿದವು. ಉಜಿರೆಯ ಶ್ರೀ ದಂತ ಚಿಕಿತ್ಸಾಲಯದ ದಂತ ವೈದ್ಯರಾದ ಡಾ. ಎಂ ಎಂ ದಯಾಕರ್ ಅವರು ವಿಜ್ಞಾನ ಮೇಳವನ್ನು ಉದ್ಘಾಟಿಸಿ ದಿಕ್ಸೂಚಿ ಭಾಷಣ ಮಾಡಿದರು.
ಕಾಲೇಜಿನ ಪ್ರಾಂಶುಪಾಲ ಡಾ. ಬಿ ಎ ಕುಮಾರ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಸಮಾರೋಪ ಸಮಾರಂಭದಲ್ಲಿ ಡಾ. ಪಿ ವಿಶ್ವನಾಥ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಉಡುಪಿಯ ಪೂರ್ಣಪ್ರಜ್ಞ ಕಾಲೇಜು ವಿಜೇತ ಹಾಗೂ ಅಳ್ವಾಸ್ ಕಾಲೇಜು ಮೂಡಬಿದ್ರೆ ರನ್ನರ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡವು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ