ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾನಿಲಯದ ಸಂಸ್ಥಾಪಕರಾದ ಎ. ಶಾಮರಾವ್ ಅವರ ಆಶೀರ್ವಾದದೊಂದಿಗೆ, ಎ.ಶಾಮರಾವ್ ಪ್ರತಿಷ್ಠಾನದ ಅಧ್ಯಕ್ಷರು ಮತ್ತು ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿಗಳಾದ ಡಾ. ಸಿಎ ಎ.ರಾಘವೇಂದ್ರರಾವ್ ಮತ್ತು ಎ.ಶಾಮರಾವ್ ಪ್ರತಿಷ್ಠಾನದ ಉಪಾಧ್ಯಕ್ಷರು ಮತ್ತು ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಸಹ ಕುಲಾಧಿಪತಿಗಳಾದ ಡಾ. ಎ. ಶ್ರೀನಿವಾಸ್ ರಾವ್ ಅವರ ಮಾರ್ಗದರ್ಶನದಲ್ಲಿ ಶ್ರೀನಿವಾಸ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ಮತ್ತು ಎ. ಶಾಮ ರಾವ್ ನರ್ಸಿಂಗ್ ಸ್ಕೂಲ್, ವಳಚ್ಚಿಲ್ ಮಂಗಳೂರು ಇವರು 20ನೇ B.Sc. (N) ಮತ್ತು 18ನೇ GNM ಬ್ಯಾಚ್‌ಗಾಗಿ ಜೂನ್01, 2023ರಂದು ಪ್ರತಿಜ್ಞಾ ಸ್ವೀಕಾರ ಸಮಾರಂಭ ನಡೆಯಿತು.
ಮಂಗಳೂರಿನ ಲಕ್ಷ್ಮೀ ಮೆಮೋರಿಯಲ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಲಾರಿಸ್ಸಾಮಾರ್ತಾಸಾಮ್ಸ್ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದರು.
ಶ್ರೀನಿವಾಸ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ಮತ್ತು ಎ.ಶಾಮ ರಾವ್ ನರ್ಸಿಂಗ್ ಸ್ಕೂಲ್, ವಳಚ್ಚಿಲ್ ನ ಪ್ರಾಂಶುಪಾಲರಾದ ಡಾ.ಪ್ರದೀಪ ಎಂ, ಶ್ರೀನಿವಾಸ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ಮತ್ತು ಎ.ಶಾಮ ರಾವ್ ನರ್ಸಿಂಗ್ ಸ್ಕೂಲ್, ವಳಚ್ಚಿಲ್ ನ ಸಂಚಾಲಕರಾದ ಪ್ರೊ.ಶಾಂತಿರೆನಿಟಾಮೊರಾಸ್ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
