ಪಾಣಾಜೆ: ವಿದ್ಯಾರ್ಥಿಗಳಲ್ಲಿ ಶೈಕ್ಷಣಿಕ ಗುಣಮಟ್ಟವನ್ನು ಉನ್ನತೀಕರಿಸಲು ಕಾಮ್ ಸ್ಕೋಪ್ ಸಂಸ್ಥೆಯಿಂದ ನೀಡಲ್ಪಟ್ಟ ಶೈಕ್ಷಣಿಕ ಕಿಟ್ ಗಳನ್ನು ಇಂದು ಸುಬೋಧ ಪ್ರೌಢಶಾಲೆಯಲ್ಲಿ ಶಾಲಾ ಸಂಚಾಲಕರಾದ ಗಿಳಿಯಾಲು ಮಹಾಬಲೇಶ್ವರ ಭಟ್ ಹಾಗೂ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಜಯಶ್ರೀ ದೇವಸ್ಯ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ವಿತರಿಸಿದರು.
ದೈಹಿಕ ಶಿಕ್ಷಣ ಶಿಕ್ಷಕರಾದ ಸುಧೀರ್ ಎಸ್ ಪಿ ಅವರು ಕಾಮ್ ಸ್ಕೋಪ್ ಸಂಸ್ಥೆಯ ಬಗ್ಗೆ ಮಕ್ಕಳಿಗೆ ತಿಳಿ ಹೇಳಿದರು. ಮುಖ್ಯ ಶಿಕ್ಷಕರಾದ ಶ್ರೀಪತಿ ಭಟ್ ಐ ಶೈಕ್ಷಣಿಕ ಕಿಟ್ ಗಳನ್ನು ಪಡೆದ ನೀವೆಲ್ಲ ಅದೃಷ್ಟವಂತರು ಅದನ್ನು ಸರಿಯಾಗಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ಮಕ್ಕಳಿಗೆ ಕರೆ ನೀಡಿದರು. ಸಹ ಶಿಕ್ಷಕರಾದ ನಿರ್ಮಲ, ವಿನುತಾ ಶಾರದ ಕವಿತಾ, ರಕ್ಷಿತಾ ಹಾಗೂ ಶಿಕ್ಷಕೇತರ ಸಿಬ್ಬಂದಿಯವರಾದ ಎ ಎನ್ ಕೊಳಂಬೆಯವರು ಉಪಸ್ಥಿತರಿದ್ದು ಸಹಕರಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ