ಶ್ರೀನಿವಾಸ ವಿವಿ ವತಿಯಿಂದ ವಿಧಾನಸಭಾ ಸಭಾಧ್ಯಕ್ಷ ಯು.ಟಿ. ಖಾದರ್‌ ಗೆ ಸನ್ಮಾನ

Upayuktha
0

ಮಂಗಳೂರು: ಶ್ರೀನಿವಾಸ ವಿಶ್ವ ವಿದ್ಯಾಲಯ ಮಂಗಳೂರು ವತಿಯಿಂದ ಕರ್ನಾಟಕ ವಿಧಾನಸಭಾ ಸಭಾಧ್ಯಕ್ಷ ಯು. ಟಿ. ಖಾದರ್ ಅವರಿಗೆ ಸನ್ಮಾನ ಕಾರ್ಯಕ್ರಮ ಜೂನ್ 4ರಂದು ಹೋಟೆಲ್ ಸಾಫ್ಫಾರೋನ್‌ನಲ್ಲಿ ನಡೆಯಿತು.


ಸನ್ಮಾನ ಸ್ವೀಕರಿಸಿ ಮಾತನಾಡಿದ ಯು. ಟಿ. ಖಾದರ್ , ದೇಶದ ಬೆಳವಣಿಗೆ ಇಂದಿನ ಹಾಗೂ ಮುಂದಿನ ಯುವ ಪೀಳಿಗೆಯಿಂದ ಸಾಧ್ಯ. ಉತ್ತಮ ಭವಿಷ್ಯದ ದೃಷ್ಟಿಯಿಂದ ಶಿಕ್ಷಣಕ್ಕೆ ಹಾಗೂ ಶಿಕ್ಷಣ ಸಂಸ್ಥೆಗೆ ನೆರವು ನೀಡುವುದಾಗಿ ಹೇಳಿದರು. ಅಂತೆಯೇ ನಗರದಲ್ಲಿ ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ನೀಗಿಸಲು ಯೋಜನೆ ಮಾಡಲಾಗುವುದು ಎಂದು ಭರವಸೆ ನೀಡಿದರು.


ಮುಖ್ಯ ಅತಿಥಿ ಶ್ರೀನಿವಾಸ ವಿಶ್ವ ವಿದ್ಯಾಲಯದ ಸಹ ಕುಲಾಧಿಪತಿ ಗೌರವಾನ್ವಿತ ಡಾ. ಎ. ಶ್ರೀನಿವಾಸ ರಾವ್ ಮಾತನಾಡಿ, ಸಾಮಾಜಿಕ ಕಳಕಳಿಯ ಕಾರ್ಯದಲ್ಲಿ ನಾವು, ನಿಮ್ಮ ಜತೆಯಾಗುತ್ತೇವೆ. ವನಮಹೋತ್ಸವ ಹತ್ತಿರ ಬರುತ್ತಿದ್ದು, ದೊಡ್ಡ ಸಂಖ್ಯೆಯಲ್ಲಿ ಸಸಿ ನೆಡುವ ಉದ್ದೇಶವಿದೆ ಇದರಿಂದ ಮುಂದೆ ಮಳೆಯ ಸಮಸ್ಯೆ ಕಡಿಮೆಯಾಗಬಹುದು ಎಂದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀನಿವಾಸ ವಿಶ್ವ ವಿದ್ಯಾಲಯದ ಕುಲಾಧಿಪತಿ ಗೌರವಾನ್ವಿತಡಾ. ಸಿಎ ಎ. ರಾಘವೇಂದ್ರ ರಾವ್ ಮಾತನಾಡಿ, ಸ್ಪೀಕರ್ ಆಗಿ ಆಯ್ಕೆಯಾದ ಯು. ಟಿ. ಖಾದರ್ ಅವರನ್ನು ಅಭಿನಂದಿಸಿದರು. ಇವರು ಸೋಲಿಲ್ಲದ ಸರದಾರ ಎಂದು ಶ್ಲಾಘಿಸಿದ ಅವರು, ನಿಮ್ಮಿಂದ ಎಲ್ಲ ಕ್ಷೇತ್ರದಲ್ಲೂ ಬೆಳವಣಿಗೆ ಆಗಲಿ ಎಂದರು.


ಶ್ರೀನಿವಾಸ ವಿಶ್ವವಿದ್ಯಾಲಯ, ಆಡಳಿತ ಮಂಡಳಿ, ಟ್ರಸ್ಟಿ ಸದಸ್ಯರಾದ ಶ್ರೀಮತಿ. ಎ.ವಿಜಯಲಕ್ಷ್ಮಿ ಆರ್. ರಾವ್, ಪ್ರೊ. ಇಆರ್. ಶ್ರೀಮತಿ.ಎ.ಮಿತ್ರಾ ಎಸ್.ರಾವ್, ಅಭಿವೃದ್ಧಿ ಕುಲಸಚಿವ ಡಾ.ಅಜಯ್ ಕುಮಾರ್, ಶ್ರೀನಿವಾಸ ಸಮೂಹ ಸಂಸ್ಥೆಗಳ ಡೀನ್ ಮತ್ತು ಪ್ರಾಂಶುಪಾಲರು ಉಪಸ್ಥಿತರಿದ್ದರು.


ಶ್ರೀನಿವಾಸ ವಿವಿ ಉಪ ಕುಲಪತಿ ಡಾ. ಪಿ. ಎಸ್. ಐತಾಳ್ ಸ್ವಾಗತಿಸಿದರು,  ಶ್ರೀನಿವಾಸ ವಿಶ್ವವಿದ್ಯಾಲಯದ ಕುಲಸಚಿವ ಡಾ.ಅನಿಲ್ ಕುಮಾರ್ ವಂದಿಸಿದರು. ಡಾ. ವಿಜಯಲಕ್ಷ್ಮಿ ನಾಯಕ್ ಕಾರ್ಯಕ್ರಮ ನಿರೂಪಿಸಿದರು.

 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top