ಉಡುಪಿ: ರಾಜ್ಯ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ಪದವಿ ಮತ್ತು ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳಿಗೆ ಅರ್ಬನ್ ಮ್ಯಾನೆಜ್‍ಮೆಂಟ್ ಅಂಡ್ ವಾಟರ್ ಕನ್ಸರ್‍ವೇಷನ್ ವಿಷಯದ ಕುರಿತು ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯು (ಲಿಖಿತ ಮತ್ತು ಮೌಖಿಕ) ಜೂನ್ 27 ರಂದು ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ರಸ್ತೆಯ ಜಿ.ಕೆ.ವಿ.ಕೆ ಆವರಣದ ಪ್ರೊ. ಯು.ಆರ್ ರಾವ್ ವಿಜ್ಞಾನ ಭವನದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಕಚೇರಿಯಲ್ಲಿ ನಡೆಯಲಿದೆ.
ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಜೂನ್ 23 ರ ಒಳಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್‍ಸೈಟ್ www.kstacademy.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ