ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮ- ವಿದ್ಯಾರ್ಥಿಗಳು ಜಾಗೃತಿ ಮೂಡಿಸಬೇಕು: ಗಣೇಶ ಆಚಾರ್ಯ

Upayuktha
0

ಸುರತ್ಕಲ್‌: ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳನ್ನು ವಿದ್ಯಾರ್ಥಿಗಳು ಅರಿತುಕೊಂಡು ಜನರಲ್ಲಿ ಜಾಗೃತಿ ಮೂಡಿಸ ಬೇಕೆಂದು ಉಡುಪಿ ಜನಜಾಗೃತಿ ವೇದಿಕೆಯ ಯೋಜನಾಧಿಕಾರಿ ಗಣೇಶ ಆಚಾರ್ಯ ನುಡಿದರು.


ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ಮಂಗಳೂರು ಜನ ಜಾಗೃತಿ ವೇದಿಕೆ ಮಂಗಳೂರು ಗೋವಿಂದ ದಾಸ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸಹಭಾಗಿತ್ವದಲ್ಲಿ ಅಂತರ್ ರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯ ಪ್ರಯುಕ್ತ ಆಯೋಜಿಸಿದ್ದ ಮಂಗಳೂರು ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಯೋಜನೆಯ ಉದ್ಘಾಟನೆ ಹಾಗೂ “ ವ್ಯಸನ ಮುಕ್ತ ಯುವಜನತೆ – ಆರೋಗ್ಯ ಪೂರ್ಣ ಸಮಾಜ “ – ಕಾರ್ಯಗಾರದಲ್ಲಿ  ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.


ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಸದಾಶಿವ ಶೆಟ್ಟಿ ಉದ್ಘಾಟಿಸಿದರು. ನವಮಂಗಳೂರು ಬಂದರು ಪ್ರಾಧಿಕಾರದ ನಿವೃತ್ತ ಅಧಿಕಾರಿ ಯಕ್ಷಗುರು ಶಂಕರ ನಾರಾಯಣ ಮೈರ್ಪಾಡಿ ಹಾಗೂ ಕಾಲೇಜಿನ ಆಡಳಿತಾತ್ಮಕ ನಿರ್ದೇಶಕ ಪ್ರೊ. ರಮೇಶ್ ಕುಳಾಯಿ ಮುಖ್ಯ ಅತಿಥಿಗಳಾಗಿದ್ದರು.


ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಕಾರಾತ್ಮಕ ಚಿಂತನೆಗಳ ಮೂಲಕ ವ್ಯಸನ ಮುಕ್ತರಾಗಿ ದೇಶದ ಸತ್ಪ್ರಜೆಗಳಾಗ ಬೇಕಾಗಿದೆಂದರು.


ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧಿ ಯೋಜನೆಯ ಯೋಜನಾಧಿಕಾರಿ ಚೆನ್ನಕೇಶವ ಪ್ರಾಸ್ತಾವಿಕವಾಗಿ ಮಾತನಾಡಿದರು.

ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಅಕ್ಷತಾ ವಿ, ವಿದ್ಯಾರ್ಥಿ ಕಾರ್ಯದರ್ಶಿಗಳಾದ ಸ್ವಾತಿ ಭಟ್, ಪ್ರೀತೇಶ್, ಅನಿಶಶ್ರೀ, ಪ್ರಯಾಗ್, ಜನಜಾಗೃತಿ ವೇದಿಕೆಯ ಪ್ರವೀಣ್ ಮತ್ತು ಸುಖಲತಾ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಸ್ವಾಸ್ಥ್ಯ ಸಂಕಲ್ಪ ಪ್ರತಿಜ್ಞೆ ಸ್ವೀಕರಿಸಿದರು.

 

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter  

إرسال تعليق

0 تعليقات
إرسال تعليق (0)
To Top