ತೆಂಕನಿಡಿಯೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿ 2021-22ನೇ ಸಾಲಿನ ಕಾಲೇಜಿನ ವಾರ್ಷಿಕ ಸಂಚಿಕೆ “ಸುದರ್ಶನ”ವನ್ನು ಉಡುಪಿ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಯಶಪಾಲ್ ಎ. ಸುವರ್ಣ ಅವರು ಬಿಡುಗಡೆಗೊಳಿಸಿದರು. ವಿದ್ಯಾರ್ಥಿಗಳು ತಮ್ಮ ಅನುಭವದ ಮೂಲಕ ಕತೆ, ಕವಿತೆ, ಪ್ರಬಂಧ, ಲೇಖನ, ಚಿತ್ರಕಲೆ ಮೊದಲಾದವುಗಳನ್ನು ರಚಿಸಿ ಕಾಲೇಜು ಸಂಚಿಕೆಯನ್ನು ಚೆಂದಗಾಣಿಸಿರುವುದನ್ನು ಪ್ರಶಂಸಿಸಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಸುರೇಶ್ ರೈ ಕೆ. ಅವರು ಕಾಲೇಜಿನ ವಾರ್ಷಿಕೆ ಸಂಚಿಕೆ ಸುದರ್ಶನವನ್ನು ವಿದ್ಯಾರ್ಥಿಗಳ ಪ್ರತಿಭೆಗಳ ಅನಾವರಣವಾಗಿದೆ ಎಂದರು. ನಿವೃತ್ತ ಪ್ರಾಂಶುಪಾಲ ಡಾ. ಗಣನಾಥ ಶೆಟ್ಟಿ ಎಕ್ಕಾರು, ಹೆಬ್ರಿ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಸಾದ್ ರಾವ್ ಎಂ., ಐಕ್ಯೂಎಸಿ ಸಂಚಾಲಕ ಡಾ. ಮೇವಿ ಮಿರಾಂದ, ಖಜಾಂಚಿ ದಯಾನಂದ ಶೆಟ್ಟಿ ಕೊಜಕುಳಿ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ ಸುಜಾತ, ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಸಂಚಾಲಕ ರಾಧಾಕೃಷ್ಣ ಹಾಗೂ ಡಾ. ದುಗ್ಗಪ್ಪ ಕಜೆಕಾರ್ ಉಪಸ್ಥಿತರಿದ್ದರು. ಸಂಚಿಕೆ ಸಂಪಾದಕರಾದ ಡಾ. ವೆಂಕಟೇಶ ಹೆಚ್.ಕೆ. ಸ್ವಾಗತಿಸಿದರೆ, ಉಮೇಶ್ ಪೈ ವಂದಿಸಿದರು. ಡಾ. ದುಗ್ಗಪ್ಪ ಕಜೆಕಾರ್ ಕಾರ್ಯಕ್ರಮ ನಿರೂಪಿಸಿದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ