ತೆಂಕನಿಡಿಯೂರು ಕಾಲೇಜ್‌: ವಿಶ್ವ ತಂಬಾಕು ವಿರೋಧಿ ದಿನಾಚರಣೆ

Upayuktha
0



ತೆಂಕನಿಡಿಯೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತರ ಅಧ್ಯಯನ ಕೇಂದ್ರ ಇದರ ಐಕ್ಯೂಎಸಿ ಹಾಗೂ ಗಣಕ ವಿಜ್ಞಾನ ವಿಭಾಗದ ಜಂಟಿ ಆಶ್ರಯದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಅಂಗವಾಗಿ ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತಾತ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು. ತಂಬಾಕು ಸೇವನೆ ದುಶ್ಚಟವಾಗಿ ಬೆಳೆಯಲು ಕಾರಣವಾದ ಸಾಮಾಜಿಕ ಅಂಶಗಳ ಕುರಿತಾಗಿ ಸಮಾಜ ಶಾಸ್ತ್ರ ವಿಭಾಗದ ಉಪನ್ಯಾಸಕರಾದ ರಾಜೇಶ್ ಹಾಗೂ ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತಾಗಿ ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕಿ ಶ್ರೀಮತಿ ಜಯಂತಿ ಮಾಹಿತಿ ನೀಡಿದರು.


ಪ್ರಾಂಶುಪಾಲರಾದ ಪ್ರೊಫೆಸರ್ ಸುರೇಶ್ ರೈ ಕೆ. ಇಂದು ಯುವ ಜನಾಂಗ ದುಶ್ಚಟಗಳಿಗೆ ಬಲಿಯಾಗುವುದನ್ನು ತಪ್ಪಿಸಿ ಯುವಶಕ್ತಿ ಸಮಾಜ ಮುಖಿಯಾಗಿ ಬೆಳೆಯುವಂತೆ ಮಾಡುವ ಅಗತ್ಯತೆ ಇದೆ ಎಂದರು. ಐಕ್ಯೂಎಸಿ ಸಂಚಾಲಕರಾದ ಡಾ. ಮೇವಿ ಮೀರಾಂದ ಕಾರ್ಯಕ್ರಮದ ಔಚಿತ್ಯವನ್ನು ತಿಳಿಸಿದರೆ ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ಆಶಾ ಸಿ. ಇಂಗಳಗಿ ಸ್ವಾಗತಿಸಿದರೆ, ಯೂತ್ ರೆಡ್‍ಕ್ರಾಸ್ ಸಂಚಾಲಕರಾದ ಪ್ರಶಾಂತ ನೀಲಾವರ ತಂಬಾಕು ವಿರೋಧಿ ಪ್ರತಿಜ್ಞಾವಿಧಿ ಬೋಧಿಸಿದರು.


ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ರಾಧಾಕೃಷ್ಣ, ಕನ್ನಡ ವಿಭಾಗದ ಸಹಪ್ರಾಧ್ಯಾಪಕ ಡಾ. ವೆಂಕಟೇಶ್ ಎಚ್.ಕೆ ಉಪಸ್ಥಿತರಿದ್ದರು. ಬಿಸಿಎ ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
To Top