ತೆಂಕನಿಡಿಯೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ, ತೆಂಕನಿಡಿಯೂರು, ತೆಂಕನಿಡಿಯೂರು ಸ್ಪೋಟ್ರ್ಸ್ ಕ್ಲಬ್ ಹಾಗೂ ಲಯನ್ಸ್ ಕ್ಲಬ್ ಉಡುಪಿ ಅಮೃತ್, ಸಂಯುಕ್ತ ಆಶ್ರಯದಲ್ಲಿ ನಡೆಸಲಾದ ಮಂಗಳೂರು ವಿವಿ ಪುರುಷರ ಮತ್ತು ಮಹಿಳೆಯರಪವರ್ ಲಿಫ್ಟಿಂಗ್ ಚಾಂಪಿಯನ್‍ಷಿಪ್ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನೆರವೇರಿಸಿದ ಮಾಜಿ ಶಾಸಕ ಶ್ರೀ.ಕೆ.ರಘುಪತಿ ಭಟ್, ಸರಕಾರಿ ಸಂಸ್ಥೆಗಳಲ್ಲಿ ಇದೇ ರೀತಿಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸಿದಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸಾಕಷ್ಟು ಉತ್ತೇಜನ ನೀಡಿದಂತಾಗುತ್ತದೆ. ಈ ನಿಟ್ಟಿನಲ್ಲಿ ತೆಂಕನಿಡಿಯುರು ಕಾಲೇಜಿನ ಸಾಧನೆ ಶ್ಲಾಘನೀಯವೆಂದರು.
ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲರಾದ ಪ್ರೊ.ಸುರೇಶ್ ರೈ.ಕೆ, ಪಂದ್ಯಾಕೂಟದ ಯಶಸ್ಸಿಗೆ ಶ್ರಮಿಸಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಿ ಜಯಶಾಲಿಯಾದ ಕ್ರೀಡಾಪಟುಗಳಿಗೆ ಮುಂದಿನ ದಿನಗಳಲ್ಲಿ ಯಶಸ್ಸು ಸಿಗಲೆಂದು ಶುಭ ಹಾರೈಸಿದರು.
ಪಂದ್ಯಾಕೂಟದ ಆಯೋಜಕ ಡಾ.ರೋಶನ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ತೀರ್ಪುಗಾರರಾಗಿ ಸಹಕರಿಸಿದ ಅಂತರಾಷ್ಟ್ರೀಯ ಕ್ರೀಡಾಪಟು ಪುಷ್ಪರಾಜ್ ಹೆಗ್ಡೆ, ಪ್ರೇಮನಾಥ ಉಳ್ಳಾಲ, ಜಗದೀಶ್, ಪ್ರಭಾವತಿ, ಪ್ರಮೋದ್, ಪಂದ್ಯಾಕೂಟದ ವೀಕ್ಷಕರಾದ ಹರಿದಾಸ್ ಕೂಳೂರು, ರಾಮಚಂದ್ರ ಪಾಟ್ಕರ್, ಪ್ರಸಾದ್ ರಾವ್, ತೆಂಕನಿಡಿಯೂರು ಸ್ಪೋಟ್ರ್ಸ್ ಕ್ಲಬ್ ಅಧ್ಯಕ್ಷರಾದ ಕೃಷ್ಣಾನಂದ ಇನ್ನಿತರರು ಉಪಸ್ಥಿತರಿದ್ದರು. ಕಾಲೇಜಿನ ಕಚೇರಿ ಸಹಾಯಕರಾದ ಪಾಂಡು ಮತ್ತು ಸುನಿಲ್ ಸಹಕರಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ