ತುಳು ಕೂಟ ಕುಡ್ಲ- ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Upayuktha
0

ಮಂಗಳೂರು: ಬಂಗಾರ್ ಪರ್ಬದ ಸಂಭ್ರಮದಲ್ಲಿರುವ ಈ ಸಂಘಟನೆಯು ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ (ಕನ್ನಡ ಮಾಧ್ಯಮ) ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.95 ಕ್ಕಿಂತ ಹೆಚ್ಚು ಅಂಕ ಗಳಿಸಿದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ತುಳು ಮಾತೃ ಭಾಷೆಯನ್ನಾಡುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.


ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು ತಮ್ಮ ಅಂಕಪಟ್ಟಿಯ ಜೆರಾಕ್ಸ್ ಪ್ರತಿ ಮತ್ತು ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಿಂದ ತುಳು ಮಾತ್ರ ಭಾಷೆಯ ಬಗ್ಗೆ ಪ್ರಮಾಣೀಕೃತ ಪತ್ರ ಸಹಿತ ತಮ್ಮ ವಿಳಾಸ ಮತ್ತು ಮೊಬೈಲ್ ಸಂಖ್ಯೆಯೊಂದಿಗೆ ಜುಲೈ 15 ರೊಳಗೆ ಬಿ. ದಾಮೋದರ ನಿಸರ್ಗ ಅಧ್ಯಕ್ಷರು, ತುಳುಕೂಟ, ನಿಸರ್ಗ ಮನೆ ಮರೋಳಿ, ಮಂಗಳೂರು- 575005 ಇಲ್ಲಿಗೆ ತಲಪಿಸುವಂತೆ ಕಳುಹಿಸಬೇಕೆಂದು ಅಧ್ಯಕ್ಷ ದಾಮೋದರ ನಿಸರ್ಗ ಹಾಗೂ ಪ್ರಧಾನ ಕಾರ್ಯದರ್ಶಿ ವರ್ಕಾಡಿ ರವಿ ಅಲೆವೂರಾಯ ಜಂಟಿಯಾಗಿ ಪತ್ರಿಕಾ ಹೇಳಿಕೆಯ ಮುಖಾಂತರ ವಿನಂತಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
To Top