ಮಕ್ಕಳಹಕ್ಕುಗಳ ರಕ್ಷಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ : ಡಾ. ತಿಪ್ಪೇಸ್ವಾಮಿ

Upayuktha
0

ಉಡುಪಿ: ಮಕ್ಕಳಹಕ್ಕುಗಳ ರಕ್ಷಣೆ ಸೇರಿದಂತೆ ಅವುಗಳ ಅನುಷ್ಠಾನ ಮಾಡುವುದು ಪ್ರತಿಯೊಬ್ಬ ಇಲಾಖೆಯ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ರಾಜ್ಯಮಕ್ಕಳಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ ಹೇಳಿದರು.

ಅವರು ನಿನ್ನೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಮಕ್ಕಳರಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ, ಮಾತನಾಡುತ್ತಿದ್ದರು.


ಶಾಲಾ-ಕಾಲೇಜುಗಳು ಸೇರಿದಂತೆ ಹಾಸ್ಟೆಲ್‌ಗಳಲ್ಲಿ ಮಕ್ಕಳರಕ್ಷಣಾ ನೀತಿಯನ್ನು ತಪ್ಪದೇ ಜಾರಿಗೊಳಿಸುವುದರೊಂದಿಗೆ, ಮಕ್ಕಳಿಗೆ ಯಾವುದೇ ರೀತಿಯ ಸಮಸ್ಯೆಗಳು ಆಗದಂತೆ ನೋಡಿಕೊಳ್ಳಬೇಕು ಎಂದರು. ಶಾಲಾ-ಕಾಲೇಜು ವಸತಿಶಾಲೆಗಳಲ್ಲಿ ಮಕ್ಕಳರಕ್ಷಣಾ ಸಹಾಯವಾಣಿ 112 ಹಾಗೂ 1098 ಅನ್ನು ಗೋಡೆಯ ಮೇಲೆ ಕಡ್ಡಾಯವಾಗಿ ನಮೂದಿಸಬೇಕು ಎಂದರು.

ಗ್ರಾಮಮಟ್ಟಗಳಲ್ಲಿ ಮಕ್ಕಳರಕ್ಷಣಾ ಸಮಿತಿ, ಮಹಿಳೆ ಮತ್ತು ಮಕ್ಕಳಕಾವಲು ಸಮಿತಿ ಹಾಗೂ ಮಕ್ಕಳಶಿಕ್ಷಣ ಸಮಿತಿಗಳನ್ನು ರಚಿಸಬೇಕು. ಪ್ರತೀ ಮೂರು ತಿಂಗಳಿಗೊಮ್ಮೆ ಸಭೆ ಸೇರಿ ಮಕ್ಕಳ ಸಮಸ್ಯೆಗಳ ಬಗ್ಗೆ ಚರ್ಚಿಸಿ, ಅವುಗಳನ್ನು ಬಗೆಹರಿಸಬೇಕು ಎಂದರು.

ಶಾಲೆಯಿಂದ ಯಾವುದೇ ಮಕ್ಕಳು ಹೊರಉಳಿಯದಂತೆ ನೋಡಿಕೊಳ್ಳಬೇಕು. ಈ ಬಗ್ಗೆ ಶಿಕ್ಷಣಇಲಾಖೆ, ಸ್ಥಳೀಯ ಸಂಸ್ಥೆಗಳು ಕಾರ್ಯಪ್ರವೃತ್ತರಾಗಿರಬೇಕು ಎಂದರು.


ಶಾಲಾಆವರಣಗಳಲ್ಲಿ ವಿದ್ಯುತ್ತಂತಿಯ ಮಾರ್ಗಗಳು ಇರುವ ಬಗ್ಗೆ ಜಿಲ್ಲಾಮಟ್ಟದಲ್ಲಿ ವರದಿಯನ್ನು ನೀಡಬೇಕು ಎಂದ ಅವರು, ಇವುಗಳ ತೆರವಿಗೂ ಸಹ ಮುಂದಾಗಬೇಕು ಎಂದರು.


ಸಮಾಜದಲ್ಲಿನ ಅನಿಷ್ಠ ಪದ್ಧತಿಯಾದ ಬಾಲ್ಯವಿವಾಹಗಳು ಎಲ್ಲೂ ನಡೆಯದಂತೆ ನೋಡಿಕೊಳ್ಳಬೇಕು ಎಂದ ಅವರು, ಪ್ರೌಢಶಾಲಾಮಟ್ಟದಲ್ಲಿ ಮಕ್ಕಳು ಪ್ರೀತಿ-ಪ್ರೇಮಗಳು ನಡೆಯದಂತೆ ಕಡಿವಾಣ ಹಾಕಬೇಕು ಎಂದ ಅವರು, ಫೋಕ್ಸೋಕಾಯಿದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದರು. 

ಬಾಲಕಾರ್ಮಿಕ ಹಾಗೂ ಬಾಲ್ಯವಿವಾಹ ಪ್ರಕರಣಕ್ಕೆ ಒಳಗಾದವರಿಗೆ ಸಾಮಾಜಿಕ ಭದ್ರತಾಸೌಲಭ್ಯಗಳನ್ನು ಆದ್ಯತೆ ಮೇಲೆ ನೀಡಬೇಕು. ಪ್ರತೀಶಾಲೆಯಲ್ಲೂ ಮಕ್ಕಳಹಕ್ಕುಗಳ ಕ್ಲಬ್‌ಗಳನ್ನು ರಚಿಸುವುದರೊಂದಿಗೆ ವಿದ್ಯಾರ್ಥಿಗಳು ಅದರಲ್ಲಿ ಸಕ್ರೀಯವಾಗಿ ಭಾಗವಹಿಸಿಕೊಳ್ಳುವಂತೆ ನೋಡಿಕೊಳ್ಳುವ ಜವಾಬ್ದಾರಿ ಶಿಕ್ಷಣಇಲಾಖೆಯದ್ದಾಗಿದೆ ಎಂದ ಅವರು, ವಿದ್ಯಾರ್ಥಿಗಳಿಗೆ ಶಾಲಾ- ಶುಲ್ಕಗಳನ್ನು ಕಟ್ಟಿಲ್ಲ ಎಂಬ ಕಾರಣದಿಂದ ವರ್ಗಾವಣೆಪತ್ರವನ್ನು ತಡೆಹಿಡಿಯದಂತೆ ನೋಡಿಕೊಳ್ಳಬೇಕು ಎಂದರು.


ಸಭೆಯಲ್ಲಿ ಜಿಲ್ಲಾಕಾನೂನು ಸೇವಾಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್, ಜಿಲ್ಲಾಪಂಚಾಯತ್‌ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸರಾವ್, ಪೊಲೀಸ್ಉಪಅಧೀಕ್ಷಕ ದಿನಕರ್, ಮಹಿಳಾ ಮತ್ತು ಮಕ್ಕಳಅಭಿವೃಧ್ದಿ ಇಲಾಖೆ ಉಪನಿರ್ದೇಶಕ ಕೃಷ್ಣಪ್ಪ, ವಿವಿಧ ಜಿಲ್ಲಾಮಟ್ಟದ ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. 

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top