ಹಲಸಿಗೆ ಮೌಲ್ಯವರ್ಧನೆ ಮತ್ತು ಸೂಕ್ತ ಮಾರುಕಟ್ಟೆ ಕಲ್ಪಿಸುವುದು ಅವಶ್ಯ: ಯಶ್‌ಪಾಲ್‌ ಸುವರ್ಣ

Upayuktha
0

ಉಡುಪಿ: ಹಲಸಿನ ಮೌಲ್ಯವರ್ಧನೆ ಹಾಗೂ ರೈತಭಾಂಧವರಿಗೆ ಸೂಕ್ತ ಮಾರುಕಟ್ಟೆಯನ್ನು ಒದಗಿಸುವ ಉದ್ದೇಶದಿದ ಹಲಸಿನಮೇಳಗಳನ್ನು ಅಯೋಜಿಸಲಾಗುತ್ತಿದೆ ಇದರ ಪ್ರಯೋಜನವನ್ನು ಎಲ್ಲರೂ ಪಡೆಯಬೇಕೆಂದು ಶಾಸಕ ಯಶ್‌ಪಾಲ್‌ ಸುವರ್ಣ ತಿಳಿಸಿದರು.


ಅವರು ನಿನ್ನೆ ಉಡುಪಿ ದೊಡ್ಡಣಗುಡ್ಡೆ ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರ ಇಲ್ಲಿನ ಪುಷ್ಪ ಹರಾಜು ಕೇಂದ್ರ (ರೈತ ಸೇವಾ ಕೇಂದ್ರ)ದ ಆವರಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಉಡುಪಿ ಜಿಲ್ಲೆ ಹಾಗೂ ರೋಬೋ ಸಾಫ್ಟ್ ಟೆಕ್ನೋಲಜಿಸ್‌ ಪ್ರೈವೇಟ್‌.ಲಿ ಇವರ ಸಂಯುಕ್ತ ಆಶ್ರಯದಲ್ಲಿ ರೋಬೋ ಸಾಫ್ಟ್ ಟೆಕ್ನೋಲಜಿಸ್‌ ಪ್ರೈವೇಟ್‌.ಲಿ ರವರ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ನಿರ್ಮಾಣವಾದ ರೈತಸೇವಾ ಕೇಂದ್ರದ ಆವರಣದ ಮೇಲ್ಛಾವಣಿಯ ಲೋಕಾರ್ಪಣೆ ಹಾಗೂ ಹಲಸು ಮೇಳವನ್ನು ಉದ್ಘಾಟಿಸಿ ಮಾತನಾಡಿದರು. 


ಮಲೆನಾಡು ಸೇರಿದಂತೆ ಕರಾವಳಿ ಭಾಗದಲ್ಲಿ ಪೌಷ್ಠಿಕ ಆಹಾರಗಳಲ್ಲಿ ಒಂದಾದ ಹಲಸು ಹೇರಳವಾಗಿ ಉತ್ಪಾದನೆಯಾಗುತ್ತದೆ. ಇದಕ್ಕೆ ಹೆಚ್ಚಿನ ಮೌಲ್ಯವರ್ಧನೆ ಹಾಗೂ ಮಾರುಕಟ್ಟೆಯನ್ನು ಒದಗಿಸುವುದರಿಂದ ರೈತರು ಹೆಚ್ಚಿನ ಲಾಭ ಪಡೆಯುವುದರೊಂದಿಗೆ ಆರ್ಥಿಕವಾಗಿ ಸಬಲರಾಗಲು ಸಾಧ್ಯವಾಗುತ್ತದೆ ಎಂದರು.


ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಹಲಸಿನಿಂದ ವಿವಿದ ರೀತಿಯ ಖಾದ್ಯ ಉತ್ಪನ್ನಗಳನ್ನು ದೇಶ ವಿದೇಶಗಳಿಗೆ ರಫ್ತು ಮಾಡುವುದರಿಂದ ಹೆಚ್ಚಿನ ಲಾಭ ಪಡೆಯಲು ರೈತರು ಮುಂದಾಗಬೇಕು ಎಂದರು.


ಜಿಲ್ಲಾಧಿಕಾರಿ ಕೂರ್ಮಾರಾವ್ಎಂ ಮಾತನಾಡಿ, ಹಲಸಿನ ಮೇಳಗಳಲ್ಲಿ ವಿವಿಧ ಬಗೆಯ ಹಲಸುಗಳು ಲಭ್ಯವಿದ್ದು, ಇದನ್ನು ಜನರು ಸವಿಯಲು ಅನುಕೂಲವಾಗುವುದರ ಜೊತೆಗೆ ರೈತರಿಗೆ ಮಾರುಕಟ್ಟೆ ಸೌಲಭ್ಯ ಒದಗಲಿದೆ ಎಂದರು.


ರೋಬೋ ಸಾಫ್ಟ್ ಟೆಕ್ನೋಲಜಿಸ್‌ ಪ್ರೈವೇಟ್‌.ಲಿ ವತಿಯಿಂದ ಸಾಮಾಜಿಕ ಹೊಣೆಗಾರಿಕಾ ನಿಧಿಯಿಂದ 48.5 ಲಕ್ಷ ರೂ ವೆಚ್ಚದಲ್ಲಿ ರೈತ ಸೇವಾ ಕೇಂದ್ರದ ಮೇಲ್ಛಾವಣಿ ನಿರ್ಮಿಸಿರುವುದು ರೈತರಿಗೆ ಮತ್ತು ಸಾರ್ವಜನಿಕರಿಗೆ ಅನುಕೂಲವಾಗುವ ಕಾರ್ಯವಾಗಿದೆ ಎಂದು ಶ್ಲಾಘಿಸಿದರು.


ರೋಬೋ ಸಾಫ್ಟ್ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರವೀತೇಜ ಬೊಮ್ಮಿರೆಡ್ಡಿಪಲ್ಲಿ ಮಾತನಾಡಿ, ನಮ್ಮ ಕೆಂಪೆನಿಯ ಮುಖ್ಯಕಚೇರಿಯು ಈ ಜಿಲ್ಲೆಯಲ್ಲಿದ್ದು, ಇಲ್ಲಿನ ಅಭಿವೃಧ್ದಿ ಸೇರಿದಂತೆ ಜನಹಿತ ಕಾರ್ಯವನ್ನು ಮಾಡಲು ಕೈ ಜೋಡಿಸಲಿದ್ದೇವೆ ಎಂದರು. 


ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ತರಬೇತಿ ನಿರತ ಐ.ಎ.ಎಸ್. ಅಧಿಕಾರಿ ಯತೀಶ್, ರೋಬೋ ಸಾಫ್ಟ್ ಕಂಪೆನಿಯ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥೆ ಮತ್ತಿತರರು ಉಪಸ್ಥಿತರಿದ್ದರು.


ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಭುವನೇಶ್ವರಿ ಸ್ವಾಗತಿಸಿ, ಅಶೋಕ್‌ ಕಾಮತ್‌ ನಿರೂಪಿಸಿದರು. ರೋಬೋ ಸಾಫ್ಟ್ ಕಂಪನಿಯ ಹಣಕಾಸು ವಿಭಾಗದ ನಾಗೇಶ್‌ ದೊಂಡಿಯ ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top