ಉಡುಪಿ: ಜೂನ್ 14 ರಂದು ಜಿಲ್ಲಾ ಯುವ ಉತ್ಸವ ಕಾರ್ಯಕ್ರಮ

Upayuktha
0

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೂರ್ಣಪ್ರಜ್ಞಕಾಲೇಜು, ನೆಹರು ಯುವಕೇಂದ್ರ ಉಡುಪಿ, ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮದರ್ಜೆಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರಅಜ್ಜರಕಾಡು ಹಾಗೂ ಎನ್.ಎಸ್.ಎಸ್ ಮಂಗಳೂರು ವಿಶ್ವವಿದ್ಯಾನಿಲಯ ಇವರ ಸಹಯೋಗದೊಂದಿಗೆ ಜಿಲ್ಲಾ ಮಟ್ಟದ ಯುವಉತ್ಸವ ಕಾರ್ಯಕ್ರಮವು ಜೂನ್ 14ರಂದು ಬೆಳಗ್ಗೆ 10 ಗಂಟೆಗೆ ನಗರದ ಪೂರ್ಣಪ್ರಜ್ಞ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದೆ.


ಕಾರ್ಯಕ್ರಮವನ್ನು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾಕರಂದ್ಲಾಜೆ ಉದ್ಘಾಟಿಸಲಿದ್ದು, ಶಾಸಕ ಯಶ್‍ಪಾಲ್ ಸುವರ್ಣಅಧ್ಯಕ್ಷತೆ ವಹಿಸಲಿದ್ದಾರೆ.

  

ಸಂಸದಬಿ.ವೈ.ರಾಘವೇಂದ್ರ, ಶಾಸಕರಾದ ವಿ ಸುನಿಲ್ ಕುಮಾರ್, ಗುರುರಾಜ್ ಗಂಟಿಹೊಳೆ, ಕಿರಣ್‍ಕುಮಾರ್ ಕೊಡ್‌ಗ ಹಾಗೂ ಗುರ್ಮೆ ಸುರೇಶ್ ಪಿ ಶೆಟ್ಟಿ, ವಿಧಾನಪರಿಷತ್‍ ಸದಸ್ಯರುಗಳಾದ ಕೋಟ ಶ್ರೀನಿವಾಸ ಪೂಜಾರಿ, ಎಸ್.ಎಲ್.ಭೋಜೆಗೌಡ, ಡಾ. ತೇಜಸ್ವಿನಿ ಗೌಡ ಹಾಗೂ ಮಂಜುನಾಥ ಭಂಡಾರಿ, ನೆಹರು ಯುವಕೇಂದ್ರದ ನಿರ್ದೇಶಕ ಎಮ್‍ಎನ್ ನಟರಾಜ್,ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ,ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ,ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮದರ್ಜೆಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ, ಪೂರ್ಣಪ್ರಜ್ಞಕಾಲೇಜಿನ ನಿರ್ವಹಣಾ ಸಮಿತಿಯಗೌರವಖಜಾಂಜಿ ಸಿ.ಎ ಪ್ರಶಾಂತ್ ಹೊಳ್ಳ, ಪಿ.ಪಿ.ಸಿ ಕಾಲೇಜಿನ ಪ್ರಾಂಶುಪಾಲ ಡಾ.ರಾಘವೇಂದ್ರ ಎ, ಮಂಗಳೂರು ವಿಶ್ವವಿದ್ಯಾನಿಲಯದಎನ್.ಎಸ್.ಎಸ್ ಕೋ ಆರ್ಡಿನೇಟರ್ ಡಾ. ನಾಗರತ್ನ ಕೆ.ಎ, ಜಿಲ್ಲಾ ಯುವಅಧಿಕಾರಿ ಯಶ್ವಂತ್‍ಯಾದವ್ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top