ಉಡುಪಿ: ಉಡುಪಿಯ ದೊಡ್ಡಣಗುಡ್ಡೆಯಲ್ಲಿರುವ ಸರಕಾರಿ ಬಾಲಕರ ಬಾಲ ಮಂದಿರಕ್ಕೆ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅಂಗವಿಕಲ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಾಲಮಂದಿರದಲ್ಲಿ ಮಕ್ಕಳ ಆರೋಗ್ಯದ ಕುರಿತಂತೆ ಹೆಚ್ಚಿನ ಕಾಳಜಿ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವರು, ಮಕ್ಕಳಿಗೆ ಯಾವುದೇ ರೀತಿಯ ಕುಂದುಕೊರತೆ ಹಾಗೂ ಸಮಸ್ಯೆಗಳಾಗಂತೆ ಎಚ್ಚರಿಕೆ ವಹಿಸುವಂತೆ ಮತ್ತು ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಜಿಲ್ಲಾಧಿಕಾರಿ ಕೂರ್ಮರಾವ್ ಎಂ,ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್‍ಅಧೀಕ್ಷಕ ಅಕ್ಷಯ್ ಎಮ್ ಹಾಕೆ, ಅಪರಜಿಲ್ಲಾಧಿಕಾರಿ ವೀಣಾ ಬಿ.ಎನ್, ತರಬೇತಿ ನಿರತಐ.ಎ.ಎಸ್‍ಅಧಿಕಾರಿಯತೀಶ್, ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೃಷ್ಣಪ್ಪ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ