ಉಡುಪಿ: ನವೀಕೃತ ಶ್ರೀಕೃಷ್ಣ ಛತ್ರ ಕೃಷ್ಣಾರ್ಪಣ

Upayuktha
0


ಉಡುಪಿ: ಪರ್ಯಾಯ ಶ್ರೀ‌ಕೃಷ್ಣಾಪುರ ಮಠಾಧೀಶರಾದ ಶ್ರೀ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ತಮ್ಮ ಚತುರ್ಥ ಶ್ರೀ ಕೃಷ್ಣ ಪೂಜಾ ಪರ್ಯಾಯ ಅವಧಿಯಲ್ಲಿ ಕೆನರಾ ಬ್ಯಾಂಕ್ ಮತ್ತು ಭಕ್ತರ ನೆರವಿನೊಂದಿಗೆ ಶ್ರೀ ಕೃಷ್ಣಮಠದ ರಾಜಾಂಗಣಕ್ಕೆ ಹೊಂದಿಕೊಂಡು ಇರುವ ನವೀಕೃತ ಶ್ರೀ ಕೃಷ್ಣ ಛತ್ರವನ್ನು ಇತರೆ ಮಠಾಧೀಶರ ಉಪಸ್ಥಿತಿಯಲ್ಲಿ ಬುಧವಾರ ಶ್ರೀ ಕೃಷ್ಣನಿಗೆ ಸಮರ್ಪಿಸಿದರು.


ಸದ್ರಿ ಛತ್ರವು 1966 ರಲ್ಲಿ ಆಗಿನ ಶ್ರೀ ಶೀರೂರು ಮಠಾಧೀಶರಿಂದ ನಿರ್ಮಸಲ್ಪಟ್ಟು ಪ್ರಸ್ತುತ ಶಿಥಿಲಗೊಂಡಿತ್ತು. ಇದೀಗ ಸಮಾರು 3.5 ಕೋಟಿ ರೂ ವೆಚ್ಚದಲ್ಲಿ ಸಂಪೂರ್ಣ ನವೀಕರಿಸಲಾಗಿದೆ. ಇದರಲ್ಲಿ ಕೆಳ ಅಂತಸ್ತಿನಲ್ಲಿ ಅತೀ ಗಣ್ಯರಿಗೆ ವಿಶ್ರಾಂತಿ ಒಂದು ಸುಸಜ್ಜಿತ ಕೋಣೆ, ಕಲಾವಿದರಿಗೆ ವಿಶಾಲವಾದ ಗ್ರೀನ್ ರೂಮ್, ಪತ್ರಿಕೆ/ಮಾಧ್ಯಮದವರಿಗೆ ವಿಶ್ರಾಂತಿ ಕೋಣೆ, ಮೇಲಿನ‌ ಎರಡು ಮಹಡಿಗಳಲ್ಲಿ ಮಠದ ಸಿಬಂದಿಗಳಿಗೆ 24 ಕೋಣೆಗಳು ಸಾಕಷ್ಟು ಸಂಖ್ಯೆಯಲ್ಲಿ ಸ್ನಾನಗೃಹ ಶೌಚಗೃಹಗಳನ್ನು ನಿರ್ಮಿಸಲಾಗಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾಣಿಯೂರು, ಅದಮಾರು ಕಿರಿಯ, ಶೀರೂರು ಶ್ರೀಪಾದರು ಉಪಸ್ಥಿತರಿದ್ದರು.


ನಿರ್ಮಾಣ ಕಾರ್ಯದಲ್ಲಿ ಮಾರ್ಗದರ್ಶನ ನೀಡಿದ ಇಂಜಿನಿಯರ್ ಯುಕೆ ರಾಘವೇಂದ್ರ ರಾವ್, ಆರ್ಕಿಟೆಕ್ಟ್ ರಾಜೇಂದ್ರ ಮಯ್ಯ, ಗುತ್ತಿಗೆದಾರ ಗಂಗಾಧರ ರಾವ್, ಇಲೆಕ್ಟ್ರಿಕಲ್ ಗುತ್ತಿಗೆದಾರರ ವೇಂಕಟಕೃಷ್ಣ ಐತಾಳ್ ದಾನಿ ಎಂ ಎಂ ಭಟ್, ವಾದಿರಾಜ ಆಚಾರ್ಯ ಮೊದಲಾದವರನ್ನು ಶ್ರೀಪಾದರು ಸಂಮಾನಿಸಿದರು. ಬಿ ಗೋಪಾಲಕೃಷ್ಣ ಉಪಾಧ್ಯಾಯ ಕಾರ್ಯಕ್ರಮ ನಿರ್ವಹಿಸಿದರು. ವಿಷ್ಣುಪ್ರಸಾದ್ ಪಾಡಿಗಾರ್ ಸ್ವಾಗತಿಸಿದರು. ರಾಘವೇಂದ್ರ ರಾವ್ ಪ್ರಸ್ತಾವಿಸಿದರು. ರಾಘವೇಂದ್ರ ಉಪಾಧ್ಯಾಯ ಪ್ರಾರ್ಥನೆಗೈದರು. ದಿವಾನರಾದ ವರದರಾಜ ಭಟ್, ಕುಂಭಾಸಿ ಸೂರ್ಯನಾರಾಯಣ ಉಪಾಧ್ಯಾಯ, ರವಿಪ್ರಸಾದ್  ಮೊದಲಾದವರು ಉಪಸ್ಥಿತರಿದ್ದರು. ಮಠದ ಪುರೋಹಿತರು ಶ್ರೀನಿವಾಸ ಉಪಾಧ್ಯಾಯರ ನೇತೃತ್ವದಲ್ಲಿ ಧಾರ್ಮಿಕ ವಿಧಿಗಳು ನೆರವೇರಿದವು.

 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top