ಉಡುಪಿ: ರಾಜ್ಯ ಸರ್ಕಾರವು ರಾಜ್ಯದ ಮಹಿಳೆಯರಿಗೆ ರಾಜ್ಯಾದ್ಯಂತ ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಸಂಚರಿಸಲು ಜಾರಿಗೆ ತಂದಿರುವ ಶಕ್ತಿ ಯೋಜನೆಯು ಮಹಿಳೆಯರ ಸ್ವಾಭಿಮಾನ ಮತ್ತು ಸ್ವಾವಲಂಬಿ ಬದುಕಿಗೆ ನೆರವಾಗಲಿದೆಎಂದುರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅಂಗವಿಕಲ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಉಡುಪಿ ಜಿಲ್ಲಾಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಅವರು ನಿನ್ನೆ ಉಡುಪಿಯು ಸರ್ಕಾರಿ ಬಸ್ ನಿಲ್ದಾಣದಲ್ಲಿ ಶಕ್ತಿಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ರಾಜ್ಯದಲ್ಲಿ 20,000 ಕ್ಕೂ ಅಧಿಕ ಸರ್ಕಾರಿ ಬಸ್ ಗಳಿದ್ದು ಅವುಗಳಲ್ಲಿ 18609 ಬಸ್ ಗಳಲ್ಲಿ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ದೊರೆಯಲಿದ್ದು, ರಾಜ್ಯದ ಒಟ್ಟು ಸರ್ಕಾರಿ ಬಸ್‍ಗಳಲ್ಲಿನ ಶೇ.95 ಬಸ್ ಗಳಲ್ಲಿ ಪ್ರತಿದಿನ 41.8 ಲಕ್ಷ ಮಹಿಳೆಯರು ತಮ್ಮ ಪ್ರತಿದಿನದ ದೈನಂದಿನ ದುಡಿಮೆ ಮತ್ತಿತರ ಕಾರ್ಯಗಳಿಗೆ ಬಸ್‍ಗಳಲ್ಲಿ ಸಂಚರಿಸಲಿದ್ದು, ಈ ಉಚಿತ ಪ್ರಯಾಣವು ಮಹಿಳೆಯರ ಸ್ವಾಭಿಮಾನ ಮತ್ತು ಸ್ವಾವಲಂಬಿ ಜೀವನಕ್ಕೆ ನೆರವಾಗಲಿದೆ. ಈ ಯೋಜನೆಯಿಂದ ಸರ್ಕಾರಕ್ಕೆ ವಾರ್ಷಿಕ 4051 ಕೋಟಿ ರೂ. ವೆಚ್ಚವಾಗಲಿದ್ದು, ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ಲಿಂಗತ್ವಅಲ್ಪ ಸಂಖ್ಯಾತರು ಈ ಯೋಜನೆಯ ಲಾಭ ಪಡೆಯಲಿದ್ದಾರೆ ಎಂದರು.
ರಾಜ್ಯ ಸರ್ಕಾರವು ಚುನಾವಣಾ ಅವಧಿಯಲ್ಲಿ ನೀಡಿದ ಉಳಿದ 4 ಗ್ಯಾರಂಟಿಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು ಎಂದ ಸಚಿವರು , ಗೃಹಲಕ್ಷ್ಮಿ ಯೋಜನೆಗೆ ರಾಜ್ಯಾದ್ಯಂತ ಆಗಸ್ಟ್ 15 ರಂದು ಚಾಲನೆ ನೀಡಲಾಗುವುದು. ರಾಜ್ಯದ ಬಿಪಿಎಲ್ ಮತ್ತುಎಪಿಎಲ್ ನ ಎಲ್ಲಾ ಮಹಿಳೆಯರು ಇದರ ಪ್ರಯೋಜನ ಪಡೆಯಬಹುದಾಗಿದ್ದು, ಈ ಕುರಿತ ಅರ್ಜಿ ನಮೂನೆಯನ್ನು ಇನ್ನು 2 ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು. ಆನ್‍ಲೈನ್ ಮೂಲಕ ಅಥವಾ ಸಿಡಿಪಿಓ ಗಳ ಮೂಲಕ ,ಅಂಗನವಾಡಿ ಶಿಕ್ಷಕರ ಮೂಲಕ ಹಾಗೂ ಗ್ರಾಮಒನ್ ಮೂಲಕ ಸಹ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದರು.
ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವೆಯಾಗಿ, ಜಿಲ್ಲೆಯ ಪರಿಸ್ಥಿತಿಯ ಬಗ್ಗೆ ಜಿಲ್ಲಾಧಿಕಾರಿ ಮತ್ತು ಇತರೇ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಜಿಲ್ಲೆಯ ಎಲ್ಲಾ ಸಾರ್ವಜನಿಕರು ಮತ್ತು ಎಲ್ಲಾ ಪಕ್ಷಗಳ ಸಹಕಾರದಿಂದ , ಬಸವಣ್ಣ ಅವರ ಕಾಯಕವೇ ಕೈಲಾಸ ಹಾಗೂ ದಯಯೇ ಧರ್ಮದ ಮೂಲ ಸಂದೇಶದಂತೆ ತಾನು ಕಾರ್ಯನಿರ್ವಹಿಸಲಿದ್ದೇನೆ. ಜಿಲ್ಲಾಡಳಿತವು ಜಿಲ್ಲೆಯ ಜನರ ಸಮಸ್ಯೆಗಳಿಗೆ 24 ಗಂಟೆಗಳ ಕಾಲ ಸದಾಸ್ಪಂದಿಸುವಂತೆ ಮತ್ತು ಎಲ್ಲಾ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಅರಿತು ಕಾರ್ಯನಿರ್ವಹಿಸುವಂತೆ ಹಾಗೂ ಜಿಲ್ಲೆಯ ಪ್ರಗತಿಗೆಎಲ್ಲಾ ರೀತಿಯ ಸಂಪೂರ್ಣ ಸಹಕಾರ ನೀಡುವುದಾಗಿ ಸಚಿವರು ತಿಳಿಸಿದರು.
ಶಾಸಕ ಯಶ್ಪಾಲ್ ಸುವರ್ಣಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್‍ಅಧೀಕ್ಷಕ ಅಕ್ಷಯ್‍ಎಮ್ ಹಾಕೆ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್,ತರಬೇತಿ ನಿರತಐ.ಎ.ಎಸ್‍ಅಧಿಕಾರಿ ಯತೀಶ್ ,ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ, ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲಾಡಳಿತದ ವತಿಯಿಂದ ಜಿಲ್ಲಾಉಸ್ತುವಾರಿ ಸಚಿವರನ್ನು ಸನ್ಮಾನಿಸಲಾಯಿತು.
ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸ್ವಾಗತಿಸಿದರು. ಕ.ರಾ.ರ.ಸಾ. ನಿಗಮ ಮಂಗಳೂರು ವಿಭಾಗದ ಯಾಂತ್ರಿಕ ಆಭಿಯಂತರ ಜಯಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.ಪ್ರಶಾಂತ್ ಹಾವಂಜೆ ನಿರೂಪಿಸಿದರು.
ಶಕ್ತಿ ಯೋಜನೆಗೆ ಹಸಿರು ನಿಶಾನೆ ತೋರಿಸಿದ ಸಚಿವರು, ತಾವು ಸಹ ಬಸ್ ಏರಿಬಸ್‍ನಲ್ಲಿದ್ದ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣದ ಟಿಕೆಟ್ ಹಾಗೂ ಗುಲಾಬಿ ವಿತರಿಸಿ, ಪ್ರಯಾಣಿಕರೊಂದಿಗೆ ಬಸ್‍ನಲ್ಲಿ ಸಂಚರಿಸಿದರು. ಅದೇ ಬಸ್‍ನಲ್ಲಿದ್ದ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹಣ ನೀಡಿ ಟಿಕೆಟ್ ಪಡೆದು ಪ್ರಯಾಣಿಸಿದರು.
ಜಿಲ್ಲೆಯಲ್ಲಿ ಸರ್ಕಾರಿ ಬಸ್ ಸಂಖ್ಯೆ ಹೆಚ್ಚಳಕ್ಕೆ ಕ್ರಮ:
ಉಡುಪಿ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳ ಸಂಖ್ಯೆ ಹೆಚ್ಚಾಗಿದ್ದು, ಸರ್ಕಾರಿ ಬಸ್ ಗಳ ಸಂಖ್ಯೆಅತ್ಯಂತಕಡಿಮೆಇದ್ದು, ಸರ್ಕಾರದಶಕ್ತಿ ಯೋಜನೆಯ ಸಂಪೂರ್ಣ ಪ್ರಯೋಜನ ಜಿಲ್ಲೆಯ ಮಹಿಳೆಯರಿಗೆ ದೊರಕಿಸುವ ಉದ್ದೇಶದಿಂದ, ಜಿಲ್ಲೆಯಲ್ಲಿ ಸರ್ಕಾರಿ ಬಸ್ ಗಳನ್ನು ಹೆಚ್ಚಳ ಮಾಡುವಕುರಿತಂತೆ ಸರ್ಕಾರ ಗಮನ ಸೆಳೆಯಲಾಗುವುದು ಮತ್ತು ಸಾರಿಗೆ ಸಚಿವರೊಂದಿಗೆ ಚಿರ್ಚಿಸಿ, ಮುಖ್ಯ ಮಂತ್ರಿಗಳ ಗಮನಕ್ಕೆ ಶೀಘ್ರದಲ್ಲಿ ಪ್ರಯತ್ನಿಸುವುದಾಗಿ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ,ಅಂಗವಿಕಲ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಉಡುಪಿ ಜಿಲ್ಲಾಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಜಿಲ್ಲೆಯಲ್ಲಿ ಪ್ರಸ್ತುತ ಸ್ಥಗಿತಗೊಂಡಿರುವ ನಮ್ಮ ಬಸ್‌ಗಳ ಸಂಚಾರಕ್ಕೆ ಹಾಗೂ ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಸಹ ಬಸ್ ಸಂಖ್ಯೆ ಹೆಚ್ಚಳ ಮಾಡಲಾಗುವುದು ಎಂದು ಸಚಿವರು ಹೇಳಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ