ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ 6 ರಿಂದ 10 ನೇ ತರಗತಿವರೆಗಿನ ಮಾಧ್ಯಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟುಗಳಿಂದ ವಾರ್ಷಿಕ ರೂ. 10,000 ದಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ಇಲಾಖಾ ವೆಬ್‍ಸೈಟ್http://sevasindhuservices.karnataka.gov.inನಲ್ಲಿ ಆನ್‍ಲೈನ್ ಮೂಲಕ ಅರ್ಜಿಆಹ್ವಾನಿಸಲಾಗಿದೆ.
ರಾಜ್ಯಕ್ರೀಡಾ ಪ್ರಾಧಿಕಾರದಲ್ಲಿ ನೋಂದಾಯಿತ ಕ್ರೀಡಾ ಸಂಸ್ಥೆಗಳು 2022 ರಏಪ್ರಿಲ್ 1 ರಿಂದ 2023 ರ ಮಾರ್ಚ್ 31 ರ ವರೆಗೆ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರುವವರು, ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತಕ್ರೀಡಾ ಸಂಸ್ಥೆಗಳು ಆಯೋಜಿಸಿದ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿರುವವರು, ರಾಷ್ಟ್ರೀಯ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ರಾಜ್ಯತಂಡವನ್ನು ಪ್ರತಿನಿಧಿಸಿದ ಕ್ರೀಡಾ ಪಟುಗಳು ಹಾಗೂ ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ರಾಜ್ಯತಂಡವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳು ಜುಲೈ 31 ರ ವರೆಗೆಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತುಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2521324, 9480886467 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


