ಉಡುಪಿ: ಸ್ತ್ರೀ ಶಕ್ತಿ ಗುಂಪುಗಳ ಸದಸ್ಯರಿಗೆ ತರಬೇತಿ ಶಿಬಿರ

Upayuktha
0

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ, ಪೂರ್ಣಪ್ರಜ್ಞ ಮ್ಯಾನೆಜ್‍ಮೆಂಟ್ ಸಂಶೋಧನ ಹಾಗೂ ಅಭಿವೃದ್ಧಿ ಕೇಂದ್ರ ಉಡುಪಿ, ಪೂರ್ಣಪ್ರಜ್ಞ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಉಡುಪಿ, ಕರ್ನಾಟಕ ಬ್ಯಾಂಕ್ ಮಂಗಳೂರು ಹಾಗೂ ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯ, ಬೆಂಗಳೂರು,  ಇವರ ಸಂಯುಕ್ತ ಆಶ್ರಯದಲ್ಲಿ ಸ್ತ್ರೀ ಶಕ್ತಿ ಗುಂಪುಗಳ ಸದಸ್ಯರಿಗೆ ಎರಡು ದಿನಗಳ ತರಬೇತಿ ಶಿಬಿರದ ಉದ್ಘಾಟನೆಯು ನಿನ್ನೆ ನಗರದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಿತು.

  

ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಮಹಿಳಾ ಸಬಲೀಕರಣದ ಅಂಗವಾಗಿ ಕಾನೂನು ಅರಿವು ಮಾಹಿತಿಯೊಂದಿಗೆ ಕಾರ್ಯಕ್ರಮ ಉದ್ಘಾಟಿಸಿದರು.


ಮುಖ್ಯ ಅತಿಥಿಗಳಾಗಿ ಆಗಮಿಸಿದ ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ಶ್ಯಾಂ ಕಶ್ಯಪ್ ಮಹಿಳಾ ಸಬಲೀಕರಣಕ್ಕಾಗಿ ತರಬೇತಿ ವಿನ್ಯಾಸ ಹಾಗೂ ಮಹಿಳೆ ಸಮಾಜದಲ್ಲಿ ಸಾಮ್ಯತೆ ಪಡೆಯಲು ಇರಬೇಕಾದ ಪೂರಕ ಅಂಶಗಳ ಕುರಿತು ಮಾಹಿತಿ ನೀಡಿದರು.


ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ವಿವೇಕಾನಂದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

 

ಸ್ತ್ರೀ ಶಕ್ತಿ ಗುಂಪುಗಳ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು, ಶಿಶು ಅಭಿವೃದ್ಧಿ ಯೋಜನೆಯ ಮೇಲ್ವಿಚಾರಕಿಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು


ಡಾ. ಕೃಷ್ಣ ಕೊತಾಯ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು, ಡಾ.ಡೆನಿಟಾ ನಿರೂಪಿಸಿ, ಹಿರಿಯ ಮೇಲ್ವಿಚಾರಕಿ ಶಾಂತಿ ಪ್ರಭು ವಂದಿಸಿದರು.

 

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top