ಉಡುಪಿ: ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾಘಟಕದ ವತಿಯಿಂದ ಡಾ. ಕಾರ್ಲ್ ಲ್ಯಾಂಡ್ ಸ್ಟೇನಿಯರವ ಜನ್ಮ ದಿನದ ಅಂಗವಾಗಿ ವಿಶ್ವ ರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮವು ಜೂನ್ 14 ರಂದು ಬೆಳಗ್ಗೆ 10.30 ಕ್ಕೆ ನಗರದ ಅಜ್ಜರಕಾಡು ರೆಡ್‍ಕ್ರಾಸ್ ಭವನದ ಹೆನ್ರಿಡ್ಯುನಾಂಟ್ ಹಾಲ್‍ನಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಶಾಸಕ ಯಶ್‍ಪಾಲ್ ಸುವರ್ಣ ಉದ್ಘಾಟಿಸಲಿದ್ದು, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ಜಿಲ್ಲಾಘಟಕದ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿಅಧ್ಯಕ್ಷತೆ ವಹಿಸಲಿದ್ದಾರೆ.
ಜಿಲ್ಲಾಸ್ಪತ್ರೆಯ ಜಿಲ್ಲಾ ಸರ್ಜನ್ ಡಾ.ಸುದೇಶ್‍ಕುಮಾರ್‍ಯು, ಗೌರವ ಕಾರ್ಯದರ್ಶಿ ಬಿ.ರತ್ನಾಕರ ಶೆಟ್ಟಿ, ಗೌರವ ಖಜಾಂಚಿ ರಮಾದೇವಿ, ರೆಡ್‍ಕ್ರಾಸ್ ಪದಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿರುವರು.
ಕಾರ್ಯಕ್ರಮದಲ್ಲಿ ಅತೀ ಹೆಚ್ಚು ಬಾರಿ ರಕ್ತದಾನ ಮಾಡಿದ ದಾನಿಗಳನ್ನು ಗುರುತಿಸಿ, ಸನ್ಮಾನಿಸಲಾಗುವುದು ಎಂದು ರೆಡ್‍ಕ್ರಾಸ್ ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ