ಸಾಧನೆಯ ಮೂಲಕ ಸಮಾಜದಲ್ಲಿ ನಿಮ್ಮನ್ನು ಗುರುತಿಸಿಕೊಳ್ಳಿ: ಸೋನಿಯಾವರ್ಮ

Upayuktha
0

ಉಜಿರೆ: ಬದುಕಿನಲ್ಲಿ ಸಿಕ್ಕಿದ ಎಲ್ಲಾ ಅವಕಾಶಗಳನ್ನು ಬಳಸಿಕೊಳ್ಳಿ, ಫ್ಯಾಷನ್‌ ಯುಗದಲ್ಲಿ ಹೊಸತನಕ್ಕೆ ಉತ್ತಮ ಅವಕಾಶ ಇದೆ, ನಿಮ್ಮ ಕೆಲಸದಲ್ಲಿ ಹೊಸತನಕ್ಕೆ ಹೆಚ್ಚು ಆದ್ಯತೆ ಇರಲಿ, ಗ್ರಾಹಕರು ಅಪೇಕ್ಷೆಗೆ ಅನುಗುಣವಾಗಿ ಕೆಲಸ ಮಾಡಿ ಕೊಡುವಂತಹ ಪ್ರಯತ್ನ ಮಾಡಿ, ಸಾಧನೆಯ ಮೂಲಕ ನಿಮ್ಮನ್ನು ಗುರುತಿಸಿಕೊಳ್ಳಿ, ರುಡ್ಸೆಟ್‌ ಸಂಸ್ಥೆಯು ಏನೂ ಪ್ರತಿಫಲ ಅಪೇಕ್ಷೆ ಇಲ್ಲದೆ, ಯುವ ಯುವ ಜನತೆ ಆರ್ಥಿಕ ಸಬಲರಾಗುವ ಉದ್ದೇಶದಿಂದ ಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಸ್ಥಾಪಿಸಿದ ಈ ಸಂಸ್ಥೆಯಲ್ಲಿ ಪಡೆದ ಈ ತರಬೇತಿಯನ್ನು ಉತ್ತಮ ರೀತಿಯಲ್ಲಿ ಉಪಯೋಗಿಸಿಕೊಳ್ಳಿ ಎಂದು ಧೀಮತಿ ಮಹಿಳಾ ಸಮಾಜದ ಸ್ಥಾಪಕ ಅಧ್ಯಕ್ಷೆಯಾದ ಶ್ರೀಮತಿ ಸೋನಿಯಾವರ್ಮ ಅಭಿಪ್ರಾಯ ಪಟ್ಟರು. 


ಅವರು ಉಜಿರೆಯ ರುಡ್ಸೆಟ್ ಸಂಸ್ಥೆಯಲ್ಲಿ ನಡೆದ ಎಂಬ್ರಾಯ್ಡರಿ ಮತ್ತು ಫ್ಯಾಬ್ರಿಕ್ ಪೈಂಟಿಂಗ್ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು. ಆಧುನಿಕ ಯುಗದಲ್ಲಿ ಎಂಬ್ರಾಯ್ಡರಿ ಹೆಚ್ಚು ಬೇಡಿಕೆ ಇರುವಂತಹ ಉದ್ಯೋಗ ಕ್ಷೇತ್ರವಾಗಿದ್ದು, ಮಹಿಳೆಯರು ಮನೆಯಲ್ಲೇ ಸ್ವ ಉದ್ಯೋಗ ಪ್ರಾರಂಭಿಸಿ, ಉತ್ತಮ ಆದಾಯ ಗಳಿಸಲು ಅವಕಾಶ ಇದೆ ಎಂದರು.


ಈ ಕಾರ್ಯಕ್ರಮದಲ್ಲಿ ರುಡ್ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಗಿರಿಧರ್‌ ಕಲ್ಲಾಪುರ ರವರು ಅದ್ಯಕ್ಷ ಸ್ಥಾನ ವಹಿಸಿದ್ದರು, ಸಂಸ್ಥೆಯ ನಿರ್ದೇಶಕ ಎಂ.‌ ಸುರೇಶ್‌ ರವರು ಅತಿಥಿಗಳನ್ನು ಸ್ವಾಗತಿಸಿ ತರಬೇತಿಯ ಹಿನ್ನೋಟವನ್ನು ನೀಡಿದರು. ಹಿರಿಯ ಉಪನ್ಯಾಸಕಿ ಶ್ರೀಮತಿ ಅನಸೂಯರವರು ಕಾರ್ಯಕ್ರಮ ನಿರ್ವಹಿಸಿದರೆ, ಹಿರಿಯ ಉಪನ್ಯಾಸಕ  ಅಬ್ರಹಾಂ ಜೇಮ್ಸ್ ಧನ್ಯವಾದವಿತ್ತರು. 


ಕೆಲವು ಶಿಬಿರಾರ್ಥಿಗಳು ಅನಿಸಿಕೆಯನ್ನು ವ್ಯಕ್ತಪಡಿಸಿದರು. 35 ಜನ ಶಿಭಿರಾರ್ಥಿಗಳು 30 ದಿನಗಳ ಈ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter  

Post a Comment

0 Comments
Post a Comment (0)
Advt Slider:
To Top