ಎಸ್.ಡಿ.ಎಂ. ಕಾಲೇಜಿನಲ್ಲಿ ‘ಅನೋಖಾ 2ಕೆ23’ ಅಂತರ್ ತರಗತಿ ಫೆಸ್ಟ್
ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಸಂಖ್ಯಾಶಾಸ್ತ್ರ ವಿಭಾಗದ ‘ಸಾಂಖ್ಯ ಅಸೋಸಿಯೇಶನ್’ ಇಂದು ಆಯೋಜಿಸಿದ್ದ ‘ಅನೋಖಾ 2ಕೆ23’ ಅಂತರ್ ತರಗತಿ ಫೆಸ್ಟ್ ಉದ್ಘಾಟಿಸಿ ಅವರು ಮಾತನಾಡಿದರು.
“ವೈದ್ಯಕೀಯ ಕ್ಷೇತ್ರ ಹಾಗೂ ತಂತ್ರಜ್ಞಾನದಲ್ಲಿ ಗಣಿತ ಹಾಗೂ ಸಂಖ್ಯಾಶಾಸ್ತ್ರ ಪ್ರಭಾವ ಪಸರಿಸಿವೆ. ಇವೆರಡೂ ಕೂಡ ತಂತ್ರಜ್ಞಾನದ ಹಿಂದಿನ ಶಕ್ತಿಯಾಗಿವೆ. ಇದಕ್ಕೆ ‘ಬಾರ್ ಕೋಡಿಂಗ್’ ಒಂದು ಉತ್ತಮ ನಿದರ್ಶನವಾಗಿದೆ” ಎಂದು ಅವರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಶುಭ ಹಾರೈಸಿದರು. ಸಂಖ್ಯಾಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರೊ. ಶಾಂತಿ ಪ್ರಕಾಶ್, ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಅಂತಿಮ ಬಿಎಸ್ಸಿ ವಿದ್ಯಾರ್ಥಿನಿ ಧೀಮಹಿ ಸ್ವಾಗತಿಸಿದರು. ಅಂತಿಮ ಬಿಎಸ್ಸಿ ವಿದ್ಯಾರ್ಥಿನಿ, ಸಾಂಖ್ಯ ಅಸೋಸಿಯೇಶನ್ ಅಧ್ಯಕ್ಷೆ ಸುಪ್ರೀತಾ ನಿರೂಪಿಸಿದರು. ಸಂಯೋಜಕಿ (ದ್ವಿತೀಯ ಬಿಎಸ್ಸಿ ವಿದ್ಯಾರ್ಥಿನಿ) ನಾಗಶ್ರೀ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ


