ವಿಷನ್ ಬೈಂದೂರು- ಶಾಸಕ ಗುರುರಾಜ್ ಗಂಟಿಹೊಳೆ ಜತೆ ನಾಗರಿಕರ ಮಾತು ಮಂಥನ ನಾಳೆ

Upayuktha
0

ಬೈಂದೂರು: ಪ್ರಗತಿಯ ದೃಷ್ಟಿ, ಹೊಸ ಆಲೋಚನೆಗಳ ಸೃಷ್ಟಿಗೆ ವೇದಿಕೆ ಕಲ್ಪಿಸುವ ಆಶಯದೊಂದಿಗೆ 'ಕುಂದಾಪ್ರ ಡಾಟ್ ಕಾಂ' ವಿಷನ್ ಬೈಂದೂರು ಎಂಬ ಕಾರ್ಯಕ್ರಮವನ್ನು  ಜೂನ್.24ರ ಶನಿವಾರ ಮಧ್ಯಾಹ್ನ 2 ಗಂಟೆಗೆ ಉಪ್ಪುಂದದ ನಂದನವನ - ದೇವಕಿ ಬಿ.ಆರ್. ಸಭಾಂಗಣದಲ್ಲಿ ಆಯೋಜಿಸಿದೆ.


ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹಾಗೂ ಅಭಿವೃದ್ಧಿಯ ಕನಸು ಹೊತ್ತ ನಾಗರಿಕರೊಂದಿಗೆ ಮಾತು - ಚರ್ಚೆ - ಮಂಥನ ನಡೆಯಲಿದೆ. 


ಕಾರ್ಯಕ್ರಮವನ್ನು ಬೈಂದೂರಿನ ಮಾಜಿ ಶಾಸಕ ಬಿ. ಅಪ್ಪಣ್ಣ ಹೆಗ್ಡೆ ಉದ್ಘಾಟನೆ ಮಾಡಲಿದ್ದಾರೆ. ಈ ವೇಳೆ ಅಭಿವೃದ್ಧಿಯ ಪರಿಕಲ್ಪನೆ ಎಂಬ ವಿಷಯದ ಬಗ್ಗೆ ರಾಜ್ಯ ಪಂಚಾಯತ್ ರಾಜ್ ಸಂಪನ್ಮೂಲ ವ್ಯಕ್ತಿ ಎಸ್. ಜನಾರ್ದನ ಮರವಂತೆ ಹಾಗೂ ಅಭಿವೃದ್ಧಿ ಸಮಸ್ಯೆ ಮತ್ತು ಸವಾಲುಗಳು ಎಂಬ ವಿಷಯದ ಬಗ್ಗೆ ಕೇಂದ್ರ ರೈಲ್ವೆ ಬೋರ್ಡ್ ಮಾಜಿ ಸದಸ್ಯ ಕೆ. ವೆಂಕಟೇಶ್ ಕಿಣಿ ವಿಚಾರ ಮಂಡನೆ ಮಾಡಲಿದ್ದಾರೆ. ಬಳಿಕ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅವರೊಂದಿಗೆ ಸಾರ್ವಜನಿಕರ ಸಂವಾದ ನಡೆಯಲಿದ್ದು, ಬೈಂದೂರು ವಿಧಾನಸಭಾ ಕ್ಷೇತ್ರದ ನಾಗರಿಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ ಎಂದು ಸಂಪಾದಕ ಸುನಿಲ್ ಹೆಚ್. ಜಿ. ಬೈಂದೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 



Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top