ವಿವೇಕಾನಂದ ಪದವಿ ಪೂರ್ವಕಾಲೇಜಿನಲ್ಲಿ ಸಾಧಕ ವಿದ್ಯಾರ್ಥಿಗಳೊಂದಿಗೆ ಸಂವಾದ

Upayuktha
0

 


ಪುತ್ತೂರು: 2022-23 ನೇ ಸಾಲಿನ  ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಸಾಧನೆಗೈದ ವಿವೇಕಾನಂದ ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿಗಳ ಜೊತೆ  ಪ್ರಸಕ್ತ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಯಿತು. ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ 3ನೇ ರ್‍ಯಾಂಕ್‌ ಪಡೆದ ವಿದ್ಯಾರ್ಥಿ ಆದಿತ್ಯ ನಾರಾಯಣ ಪಿ ಎಸ್  ಹಾಗೂ ಕಲಾ ವಿಭಾಗದಲ್ಲಿ ರಾಜ್ಯಕ್ಕೆ 3ನೇ ರ್‍ಯಾಂಕ್‌ ಪಡೆದ ಮಂಜುಶ್ರೀ ಕಳೆದ ವರ್ಷದ ತಮ್ಮ ಅನುಭವಗಳನ್ನು ಈ ಸಂದರ್ಭದಲ್ಲಿ ಹಂಚಿಕೊಂಡರು. ಪರೀಕ್ಷೆಗಳಿಗೆ ಮುಂಚಿತವಾಗಿ ತಾವು ಮಾಡುತ್ತಿದ್ದತಯಾರಿ, ಓದುತ್ತಿದ್ದ ಪುಸ್ತಕಗಳು, ಮಾನಸಿಕ ಒತ್ತಡವನ್ನು ನಿಭಾಯಿಸಲು ಅನುಸರಿಸುತ್ತಿದ್ದ ಕ್ರಮಗಳು ಮುಂತಾದ ವಿಷಯಗಳ ಬಗ್ಗೆ ಕಿರಿಯರಿಗೆ ಮಾಹಿತಿ ನೀಡಿದರು.ಪರೀಕ್ಷೆಗಳನ್ನು ಎದುರಿಸುವಾಗ ಬರುವ ಸವಾಲುಗಳು ಮತ್ತು ಅವುಗಳನ್ನು ನಿಭಾಯಿಸುವ ರೀತಿಯ ಬಗ್ಗೆ ಮಾಹಿತಿ ನೀಡಿ ಅನೇಕ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಪರಿಹಾರ ಸೂಚಿಸಿ ಉತ್ತರ ನೀಡಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು  ಪ್ರಾಂಶುಪಾಲ ಮಹೇಶ್ ನಿಟಿಲಾಪುರ ವಹಿಸಿದ್ದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಉಷಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ  ಪಲ್ಲವಿ ಭಟ್‍ ಕಾರ್ಯಕ್ರಮ ನಿರೂಪಿಸಿದರು. ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿನಿ ಖುಷಿ ಸ್ವಾಗತಿಸಿ ಸಂಸ್ಕೃತಿಜೈನ್‍ ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
To Top