ವಿವೇಕಾನಂದ ಪ.ಪೂ.ಕಾಲೇಜಿನಲ್ಲಿ ವಿಜ್ಞಾನ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

Upayuktha
0

ಪುತ್ತೂರು:  ವಿವೇಕಾನಂದ ಪದವಿಪೂರ್ವಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ವಿಜ್ಞಾನ ಸಂಘದ ವತಿಯಿಂದ ವ್ಯಕ್ತಿತ್ವ ವಿಕಸನ ಕಾರ್ಯಕ್ರಮವನ್ನು ಆಯೋಜಿಸಿಲಾಗಿತ್ತು. 


ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ವಿವೇಕಾನಂದ ಪದವಿ ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕ ಹಾಗೂ ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್‍ನ ನಿರ್ದೇಶಕ ಡಾ. ಶ್ರೀಶ ಭಟ್‍ಮತ್ತುತಂಡದ ಸದಸ್ಯರಾದ ಜೀವಿತ, ರಾಕೇಶ್, ಶ್ರೇಯಾಭಟ್, ಅನುಷಾ, ಸರ್ವೇಶ್, ನವ್ಯಶ್ರೀ, ಬಾಲಕೃಷ್ಣ ಇವರಿಂದ ಸ್ವೋಟ್ ವಿಶ್ಲೇಷಣೆ, ಹ್ಯಾಕಥಾನ್ ಎಂಬ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಿಗೆ ತಮ್ಮಲ್ಲಿ ಅಡಕವಾಗಿರುವ ಸಾಮಥ್ರ್ಯ, ದೌರ್ಬಲ್ಯಗಳನ್ನು ಗುರುತಿಸಲು ಸಹಾಯ ಮಡುವ ಸರಳ ವಿಧಾನಗಳ ಬಗ್ಗೆ ಮಾಹಿತಿ ನೀಡಲಾಯಿತು. 


ಕಾರ್ಯಕ್ರಮದಲ್ಲಿ ಸಂಯೋಜಕಿ ದೀಕ್ಷಿತಾ ಉಪಸ್ಥಿತರಿದ್ದರು. ಉಪನ್ಯಾಸಕಿ ಡಾ. ಶ್ರುತಿ ಸ್ವಾಗತಿಸಿ ವಂದಿಸಿದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

Post a Comment

0 Comments
Post a Comment (0)
To Top