ಮಂಗಳೂರು: ಸ್ಥಿರಾಸ್ತಿ ನೋಂದಣಿ ಸಾಫ್ಟ್‌ವೇರ್ ಕಾವೇರಿ-2 ತಂತ್ರಜ್ಞಾನದ ಕುರಿತು ಮಾಹಿತಿ ಕಾರ್ಯಾಗಾರ ಇಂದು ಸಂಜೆ 4:30ಕ್ಕೆ3 ನಗರದ ಕೊಡಿಯಾಲ್ ಬೈಲಿನ ಶಾರದಾ ವಿದ್ಯಾಲಯದ ಧ್ಯಾನ ಮಂದಿರದಲ್ಲಿ ಆಯೋಜಿಸಲಾಗಿದೆ.
ಅದಿವಕ್ತ ಪರಿಷತ್ ಮಂಗಳೂರು ಈ ಕಾರ್ಯಕ್ರಮವನ್ನು ಸಂಘಟಿಸಿದೆ. ನೋಂದಣಾಧಿಕಾರಿ ಸಯ್ಯದ್ ನೂರ್ ಪಾಷಾ, ಪರಿಣತರಾದ ರಾಮ್ ಪ್ರಸಾದ್ ತಗದೂರ್, ಉಪ ನೋಂದಣಾಧಿಕಾರಿ ಶ್ರೀಮತಿ ಕವಿತಾ ಪಿ.ಬಿ ಅವರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಹತ್ವದ ಮಾಹಿತಿಗಳನ್ನು ಹಂಚಿಕೊಳ್ಳಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ನ್ಯಾಯವಾದಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳಬಹುದು ಎಂದು ಅದಿವಕ್ತ ಪರಿಷತ್‌ನ ಪ್ರಕಟಣೆ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ