ಕೃಷಿ ವಿಜ್ಞಾನ ಕೇಂದ್ರ ಮಂಗಳೂರಿನಲ್ಲಿ ವಿಶ್ವ ಪರಿಸರ ದಿನಾಚರಣೆ

Upayuktha
0


ಮಂಗಳೂರು: ನಗರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಹಾಗೂ ಭಾರತೀಯ ವಿಕಾಸ ಟ್ರಸ್ಟ್, ಮಣಿಪಾಲ ಇವರ ಸಹಯೋಗದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.

ಕೆವಿಕೆಯ ಮುಖ್ಯಸ್ಥ ಡಾ. ರಮೇಶ್ ಕೆ. ವಿ ಕಾರ್ಯಕ್ರಮ ಉದ್ಘಾಟಿಸಿ, ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ, ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಿ ಮುಂದಿನ ಪೀಳಿಗೆಗೆ ನಮ್ಮ ಪರಿಸರ ರಕ್ಷಣೆ ಮಾಡೋಣ, ಎಂದು ಕರೆ ನೀಡಿದರು. ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕಾಲೇಜಿನ ಸಹಾಯಕ ಪ್ರಾಧ್ಯಾಪಕ  ಡಾ.ಎಂ.ಎನ್. ಸಿದ್ದರಾಜು ಮಾತನಾಡಿ, ಪರಿಸರ ಸ್ನೇಹಿ ತಂತ್ರಜ್ಞಾನ ಬಳಕೆಯಿಂದ ಪರಿಸರ ರಕ್ಷಣೆ ಹೇಗೆ ಮಾಡಬಹುದು ಎಂಬುದನ್ನು ವಿವರಿಸಿದರು. 

ಕೆವಿಕೆಯ ಸಸ್ಯ ಸಂರಕ್ಷಣೆ ವಿಜ್ಞಾನಿ ಡಾ. ಕೇದಾರನಾಥ್ ಪರಿಸರ ರಕ್ಷಣೆ ಕ್ರಮಗಳ ಬಗ್ಗೆ ವಿವರಿಸಿದರು. ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಕಾರ್ಯಕ್ರಮ ವ್ಯವಸ್ಥಾಪಕ ಜೀವನ್ ಕಾರ್ಯಕ್ರಮ ನಿರೂಪಿಸಿದರು. ವಿಶ್ವವಿದ್ಯಾಲಯ ಕಾಲೇಜು ಮಂಗಳೂರು ಇಲ್ಲಿಯ ವಿದ್ಯಾರ್ಥಿಗಳು ಕೆವಿಕೆ ಪರಿಸದಲ್ಲಿ ಗಿಡ ನೆಡುವುದರ ಮೂಲಕ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top