ಉಡುಪಿ: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ ವತಿಯಿಂದ ಡಾ| ಶಿವರಾಮ ಕಾರಂತ ಪ್ರತಿಷ್ಟಾನ, ಟ್ರಸ್ಟ್ ಸಹಯೋಗದಲ್ಲಿ ಕೋಟ ಕಾರಂತ ಥೀಮ್ ಪಾರ್ಕ್‌ನಲ್ಲಿ ಜೂನ್ 4 ಆದಿತ್ಯವಾರ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ 139ನೇ ಜನ್ಮದಿನಾಚರಣೆ ಅಂಗವಾಗಿ ಕಿರುಚಿತ್ರ ರಚನಾ ಕಮ್ಮಟ ಮತ್ತು ಜಿಲ್ಲಾ ಮಟ್ಟದ ಕವಿಗೋಷ್ಠಿ ನಡೆಯಿತು.
ಕಾರ್ಯಕ್ರಮವನ್ನು ಕೋಟತಟ್ಟು ಗ್ರಾ.ಪಂ ಅಧ್ಯಕ್ಷೆ ಅಶ್ವಿನಿ ದಿನೇಶ್ ಉದ್ಘಾಟಿಸಿ ಶುಭ ಹಾರೈಸಿದರು.
ಅಧ್ಯಕ್ಷತೆಯನ್ನು ಕ.ಸಾ.ಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ವಹಿಸಿದ್ದರು. ವೇದಿಕೆಯಲ್ಲಿ ಗ್ರಾ.ಪಂ ಉಪಾಧ್ಯಕ್ಷ ವಾಸು ಪೂಜಾರಿ, ಸಂಪನ್ಮೂಲ ವ್ಯಕ್ತಿ ಸುರೇಂದ್ರ ಕೋಟ, ಕ.ಸಾ.ಪ ಕುಂದಾಪುರ ಅಧ್ಯಕ್ಷ ಡಾ| ಉಮೇಶ್ ಪುತ್ರನ್, ಬ್ರಹ್ಮಾವರ ಅಧ್ಯಕ್ಷ ರಾಮಚಂದ್ರ ಐತಾಳ, ಮುಂತಾದವರಿದ್ದರು. ಸತೀಶ್ ವಡ್ಡರ್ಸೆ ನಿರೂಪಿಸಿದರು. ಕೋಟ ನರೇಂದ್ರ ಕುಮಾರ್ ಸ್ವಾಗತಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ