ಶ್ರೀನಿವಾಸ ವಿವಿ: ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮ

Upayuktha
0

ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾನಿಲಯದ ಇನ್‌ಸ್ಟಿಟ್ಯೂಟ್ ಆಫ್ ಪೋರ್ಟ್ ಶಿಪ್ಪಿಂಗ್ ಮತ್ತು ಲಾಜಿಸ್ಟಿಕ್ಸ್ ಮ್ಯಾನೇಜ್‌ಮೆಂಟ್‌ ಹಾಗೂ ಎನ್‌ಎಸ್‌ಎಸ್‌ ಸಹಯೋಗದಲ್ಲಿ ಡ್ರಗ್ಸ್‌ ದುರ್ಬಳಕೆ ಮತ್ತು ಅಕ್ರಮ ಕಳ್ಳಸಾಗಣೆ ವಿರುದ್ಧ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು.


ಕ್ಯಾಂಪಸ್‌ನ ಒಳಗೆ ಮತ್ತು ಹೊರಗೆ ಮಾದಕ ದ್ರವ್ಯ ಮುಕ್ತ ಕ್ಯಾಂಪಸ್ ಅನ್ನು ಖಚಿತಪಡಿಸಿಕೊಳ್ಳಲು ಇನ್‌ಸ್ಟಿಟ್ಯೂಟ್ ಆಫ್ ಪೋರ್ಟ್ ಶಿಪ್ಪಿಂಗ್ ಮತ್ತು ಲಾಜಿಸ್ಟಿಕ್ಸ್ ಮ್ಯಾನೇಜ್‌ಮೆಂಟ್‌ನ ರಾಷ್ಟ್ರೀಯ ಸೇವಾ ಯೋಜನೆಯು ಶುಕ್ರವಾರ (ಜೂ.30) ಕಾರ್ಯಕ್ರಮ ಆಯೋಜಿಸಿತ್ತು. 


ಅಲ್ಲದೆ ಜೂನ್ 26 ರಂದು ಈ ಕುರಿತು ವಿಚಾರ ಸಂಕಿರಣ ಆಯೋಜಿಸಲಾಗಿತ್ತು. ಮಂಗಳೂರಿನ ಅಪರಾಧ ತನಿಖಾ ವಿಭಾಗದ ನಾರ್ಕೋಟಿಕ್ ಡ್ರಗ್ ಸೆಲ್ ಇನ್‌ಸ್ಪೆಕ್ಟರ್ ಹೇಮಂತ್ ಕುಮಾರ್ ಮತ್ತು ಶಿವ ಪ್ರಸಾದ್ ಅವರು ಉಪನ್ಯಾಸ ನೀಡಿದರು. ವಿದ್ಯಾರ್ಥಿಗಳಿಗೆ ಮಾದಕ ವ್ಯಸನದಲ್ಲಿ ಒಳಗೊಂಡಿರುವ ಅಪಾಯಗಳ ಬಗ್ಗೆ  ಮತ್ತು ಹೊಸ ಸೈಕೋಆಕ್ಟಿವ್ ಡ್ರಗ್‌ಗಳ ಹಾನಿಕಾರಕ ಪರಿಣಾಮಗಳ ಬಗ್ಗೆ ತಿಳಿಸಿದರು.


ಅಂತಾರಾಷ್ಟ್ರೀಯ ವ್ಯವಹಾರ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿನಿ ಅನಾಮಿಕಾ ಸ್ವಾಗತಿಸಿದರು. ಅವರು ಅರಿವಿನ ಮಹತ್ವ ಮತ್ತು ಈ ವರ್ಷದ ಆಚರಣೆಯ ಘೋಷವಾಕ್ಯದ ಬಗ್ಗೆ ವಿವರಿಸಿದರು. ಪೊಲೀಸ್ ಸಿಐಡಿ ಇನ್ಸ್‌ಪೆಕ್ಟರ್ ಹೇಮಂತ್ ಕುಮಾರ್ ಮಾತನಾಡಿ, ಮದ್ಯ ಮತ್ತು ಇತರ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು ಮತ್ತು ಅಪಾಯಗಳನ್ನು ಒತ್ತಿ ಹೇಳಿದರು. ವಿದ್ಯಾರ್ಥಿಗಳಲ್ಲಿ ಮಾದಕ ವ್ಯಸನದ ಕುರಿತು ಜಾಗೃತಿ ಅಭಿಯಾನದ ಮಹತ್ವವನ್ನು ತಿಳಿಸಿದ ಅವರು ಮಾದಕ ದ್ರವ್ಯ ಮತ್ತು ಮದ್ಯಪಾನ ಸಂಬಂಧಿತ ಘಟನೆಗಳನ್ನು ತಡೆಗಟ್ಟುವಲ್ಲಿ ವಿದ್ಯಾರ್ಥಿ ಸಮುದಾಯದ ಪಾಲ್ಗೊಳ್ಳುವಿಕೆಯ ಮಹತ್ವದ ಕುರಿತು ಸಂವಾದ ನಡೆಸಿದರು.

ಪ್ರಥಮ ವರ್ಷದ ಲಾಜಿಸ್ಟಿಕ್ಸ್ ವಿದ್ಯಾರ್ಥಿನಿ ವಿಮ್ಶಾ ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top