ದೇಶವಿರೋಧಿ ದುಷ್ಟ ಶಕ್ತಿಗಳು ಬಿಲದಿಂದ ಹೊರಗೆ ಬರುತ್ತಿವೆ: ಡಾ. ಭರತ್ ಶೆಟ್ಟಿ ವೈ

Upayuktha
0


ಸುರತ್ಕಲ್: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಕೂಡಲೇ ಬಿಲದಲ್ಲಿ ಅಡಗಿ ಕುಳಿತಿದ್ದ ದುಷ್ಟ ಶಕ್ತಿಗಳು ಒಂದೊಂದಾಗಿ ಹೊರಗೆ ಬರುತ್ತಿವೆ. ಇದಕ್ಕೆ ಕಾಂಗ್ರೆಸ್ ಪಕ್ಷದ ಮೇಲೆ, ಹಾಗೂ ಅದರ ಆಡಳಿತದ ಮೇಲೆ ಯಾವುದೇ ಹೆದರಿಕೆ ಇಲ್ಲದಿರುವುದೇ ಕಾರಣ ಎಂದು ಡಾ. ಭರತ್ ಶೆಟ್ಟಿ ಹೇಳಿದ್ದಾರೆ.


ಬಿಜೆಪಿ ಅಧಿಕಾರದಲ್ಲಿದ್ದಾಗ ಉಗ್ರರ ಚಟುವಟಿಕೆಗಳನ್ನು ಸಂಪೂರ್ಣ ಮಟ್ಟ ಹಾಕಲಾಗಿತ್ತು. ಇದೀಗ ರಾಜಾರೋಷವಾಗಿ ಬಾಂಬುಗಳ ತಯಾರಿಕೆಗೆ ಬೇಕಾದ ವಸ್ತುಗಳನ್ನು ಖರೀದಿಸಲು ಬೆಂಗಳೂರಿನಲ್ಲಿ ಓಡಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಉಗ್ರ ವಿದ್ವಾಂಸಕ ಕೃತ್ಯ ನಡೆಸಲು ಮುಂದಾಗಿರುವುದು ಆತಂಕಕಾರಿ ಬೆಳವಣಿಗೆ. ಇವರ ಗುರಿ ಹಿಂದೂ ಸಮುದಾಯವೇ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಕಾಂಗ್ರೆಸ್ ಸರ್ಕಾರವು ತಕ್ಷಣ ರಾಜ್ಯದ ಜನರ ಸುರಕ್ಷತೆಯ ಬಗ್ಗೆ ಮೊದಲ ಆದ್ಯತೆಯನ್ನು ನೀಡಬೇಕು. 

ಸಿಂಧನೂರು ಬಂಗಾಳಿ ಕ್ಯಾಂಪ್ ಗೆ ನುಗ್ಗಿ ದಾಂಧಲೆಗೈದವರ ವಿರುದ್ದ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಆಗ್ರಹಿಸಿದರು.


ಅಲ್ಪಸಂಖ್ಯಾತ ಸಮುದಾಯಕ್ಕೆ ನೋವಾಗುತ್ತದೆ ಎಂದು ಮೀನ-ಮೇಷ ಎಣಿಸದೆ ಇಂತಹ ಉಗ್ರ ಕೃತ್ಯಗಖನ್ನು ಕೃತ್ಯಗಳನ್ನು ಬೇರು ಸಹಿತ ಕಿತ್ತು ಹಾಕಲು ಯಾವುದೇ ತಪಾಸಣೆ, ವಿಚಾರಣೆಗಾಗಿ ಪೊಲೀಸ್ ಇಲಾಖೆ ಸೂಕ್ತ ಕ್ರಮವನ್ನು ಕೈಗೊಳ್ಳಲು ಮುಕ್ತ ಅವಕಾಶ ನೀಡಬೇಕು ಎಂದು ಡಾ.ಭರತ್ ಶೆಟ್ಟಿ ವೈ ಒತ್ತಾಯಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter  

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top