ಮಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರವು 9 ವರ್ಷಗಳನ್ನು ಪೂರೈಸಿದ ಈ ಸಂದರ್ಭದಲ್ಲಿ ಸರಕಾರದ ಸಾಧನೆಗಳ ಕಿರು ಹೊತ್ತಿಗೆಯನ್ನು ಮಂಗಳೂರು ನಗರ ಉತ್ತರ ಮಂಡಲದಲ್ಲಿ ಸಮರ್ಥನ್ ಸೇ ಸಂಘಟನ್ ಎನ್ನುವ ಕಲ್ಪನೆಯೊಂದಿಗೆ ಹಮ್ಮಿಕೊಳ್ಳಲಾಗಿದೆ. ಶಾಸಕ ಡಾ. ಭರತ್ ಶೆಟ್ಟಿಯವರ ನೇತೃತ್ವದಲ್ಲಿ ಮರಕಡ ಮತ್ತು ಕುಂಜತ್ತಬೈಲ್ ವಾರ್ಡಿನ ಪ್ರಮುಖರ ಮನೆ ಸಂಪರ್ಕ ಮಾಡುವ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷರಾದ ತಿಲಕ್ ರಾಜ್ ಕೃಷ್ಣಾಪುರ, ಪ್ರಧಾನ ಕಾರ್ಯದರ್ಶಿಯಾದ ಸಂದೀಪ್ ಪಚ್ಚನಾಡಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷರು ಹಾಗೂ ಮಹಾನಗರ ಪಾಲಿಕೆ ಸದಸ್ಯರಾದ ಲೋಹಿತ್ ಅಮೀನ್, ಮಹಾನಗರ ಪಾಲಿಕೆಯ ಸದಸ್ಯರಾದ ಶರತ್ ಕುಮಾರ್, ಜಿಲ್ಲಾ ಸಮಿತಿ ಸದಸ್ಯರಾದ ಹರೀಶ್ ಶೆಟ್ಟಿ, ಮಂಡಲದ ಸದಸ್ಯರಾದ ಪ್ರೇಮ್ ಚಂದ್ರ ರಾವ್, ಶಕ್ತಿಕೇಂದ್ರ ಪ್ರಮುಖರಾದ ಗಣೇಶ್ ಕುಲಾಲ್, ಸಾಮಾಜಿಕ ಜಾಲತಾಣ ಪ್ರಕೋಷ್ಠದ ಮಂಡಲ ಸಹ ಸಂಚಾಲಕರಾದ ಧನಂಜಯ ಮರಕಡ ಮತ್ತು ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಈ ಕಾರ್ಯದಲ್ಲಿ ಭಾಗವಹಿಸಿದ್ದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ