ಬದಿಯಡ್ಕ: ಬೆಂಗಳೂರು ಬಯೋಟೆಕ್ ಪ್ರೈವೇಟ್ ಲಿಮಿಟೆಡ್‌ನ ಆಡಳಿತ ನಿರ್ದೇಶಕ ಡಾ| ಶಾಮಭಟ್ ಪೊಟ್ಟಿಪ್ಪಲ ಮಂಗಳವಾರ ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠಕ್ಕೆ ಭೇಟಿನೀಡಿ ಮಾತನಾಡಿ ಪ್ರಾಮಾಣಿಕವಾಗಿ ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಅನುಕೂಲ ಮಾಡಿಕೊಡುವ ಇಂತಹ ಶಾಲೆ ಸಮಾಜಕ್ಕೆ ಆವಶ್ಯಕತೆಯಿದೆ. ಎಲ್ಲಾ ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಮಹತ್ತರ ಸಾಧನೆಯನ್ನು ಮಾಡಿದಾಗ ಹೆತ್ತವರಿಗೆ ಆಗುವ ಸಂತಸ ವರ್ಣಿಸಲಸದವು ಎಂದು ಶಾಲೆಯ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ವಿತರಿಸಿದರು.
9ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಶಿಫಾಲಿ ಬೆಳಿಂಜ ಹಾಗೂ 10ನೇ ತರಗತಿಯ ವಿದ್ಯಾರ್ಥಿ ಶ್ರೀವತ್ಸ ಎಂ.ಜೆ. ಸ್ವೀಕರಿಸಿ ಕೃತಜ್ಞತಾಭಾವದೊಂದಿಗೆ ಅನಿಸಿಕೆಗಳನ್ನು ಹಂಚಿಕೊಂಡರು. ಶಾಲಾ ಸಂಚಾಲಕ ಜಯಪ್ರಕಾಶ ಪಜಿಲ ಸ್ವಯಂಪ್ರೇರಿತರಾಗಿ ನಮ್ಮ ಸಂಸ್ಥೆಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನವನ್ನು ನೀಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.
ಶಾಲಾ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶರ್ಮ ಪಂಜಿತ್ತಡ್ಕ ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ, ಆಶುಕವಿ ದಿವಂಗತ ಪೊಟ್ಟಿಪ್ಪಲ ನಾರಾಯಣ ಭಟ್ಟರ ಸ್ಮರಣಾರ್ಥ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ ಎಂದರು. ಡಾ| ಗಿರೀಶ್ ಹಾಗೂ ಡಾ| ವಾಣಿಶ್ರೀ ಪೊಟ್ಟಿಪ್ಪಲ ಉಪಸ್ಥಿತರಿದ್ದರು. ಅಧ್ಯಾಪಿಕೆಯರಾದ ರಶ್ಮಿ ಸ್ವಾಗತಿಸಿ, ಸುಪ್ರೀತಾ ರೈ ವಂದಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ