ಬೆಂಗಳೂರು: ಕರ್ನಾಟಕದಲ್ಲಿ ಹಿಂದೂ ಕಾರ್ಯಕರ್ತರು ಮತ್ತು ಜೈನ ಮುನಿಗಳ ಹತ್ಯೆ ಖಂಡಿಸಿ ಹಿಂದೂ ಸಂಘಟನೆಗಳು 'ಹಿಂದೂ ರಾಷ್ಟ್ರ ಆಂದೋಲನದ' ವತಿಯಿಂದ ಜುಲೈ 15ರಂದು ಶನಿವಾರ ಬೆಳಗ್ಗೆ 11 ಗಂಟೆಗೆ ನಗರದ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿವೆ.
ರಾಜ್ಯದಲ್ಲಿ ಇತ್ತೀಚೆಗೆ ಜೈನ ಮುನಿ ಶ್ರೀ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ನಡೆದಿತ್ತು. ಯುವ ಬ್ರಿಗೇಡ್ ಕಾರ್ಯಕರ್ತರೊಬ್ಬರ ಹತ್ಯೆಯೂ ನಡೆದಿತ್ತು.
ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಹಿಂದೂ ಸಂತರು, ಹಿಂದೂ ಸಂಘಟನೆಗಳ ಕಾರ್ಯಕರ್ತರು, ಮುಖಂಡರ ಮೇಲೆ ದೌರ್ಜನ್ಯಗಳು ಮರುಕಳಿಸುತ್ತಿವೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ