ನೃತ್ಯ ಕಲೆಯ ಅಭ್ಯಾಸದಿಂದ ಜೀವನದಲ್ಲಿ ತಾಳ್ಮೆ ಸಹನೆ ಸಾಧ್ಯ: ಸಭಾಪತಿ ಯು.ಟಿ. ಖಾದರ್

Upayuktha
0

ಮಂಗಳೂರು: ನೃತ್ಯ ಕಲೆಯ ಕಲಿಯುವಿಕೆಯಿಂದ ಜೀವನದಲ್ಲಿ ತಾಳ್ಮೆ, ಸಹನೆ, ಏಕಾಗ್ರತೆ ಬೆಳೆಯಲು ಸಾಧ್ಯ ಎಂದು ಕರ್ನಾಟಕ ಸರಕಾರದ ವಿಧಾನಸಭಾ ಸಭಾಪತಿ ಯು.ಟಿ. ಖಾದರ್ ಅಭಿಪ್ರಾಯಪಟ್ಟರು.


ಅವರು ನಗರದ ಪುರಭವನದಲ್ಲಿ ಭರತಾಂಜಲಿ(ರಿ) ಕೊಟ್ಟಾರ ಮಂಗಳೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಆಯೋಜಿಸಿರುವ ನೃತ್ಯಾಮೃತಂ-2023 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ಭರತನಾಟ್ಯ ಮತ್ತು ಯಕ್ಷಗಾನ ಕರಾವಳಿಯ ಎರಡು ಕಣ್ಣುಗಳು ಮನುಷ್ಯ ಸುಸಂಸ್ಕೃತ ಜೀವನಕ್ಕೆ ಕಲಾಭಿರುಚಿಯನ್ನು ಬೆಳೆಸಿಕೊಳ್ಳುವುದು ಅತ್ಯಗತ್ಯ. ಭರತನಾಟ್ಯ ಕಲೆಯು ಆಧ್ಯಾತ್ಮಿಕ ವಿಷಯಗಳ ಅರಿವನ್ನು ನೀಡುವುದರೊಂದಿಗೆ ಕಲೆಯಲ್ಲಿ ಪ್ರಸಿದ್ಧಿ ಪಡೆಯಬೇಕಾದರೆ ಕಠಿಣ ಪರಿಶ್ರಮದೊಂದಿಗೆ ಧ್ಯೇಯ‌ ಅತ್ಯಗತ್ಯ ಎಂದರು.


ಸನಾತನ  ಭಾರತೀಯ ಸಂಸ್ಕೃತಿ, ಸಂಸ್ಕಾರಗಳನ್ನು ಮಕ್ಕಳಿಗೆ ಹಾಗೂ ಯುವ ಜನಾಂಗಕ್ಕೆ ತಿಳಿಸಿದಾಗ ಮಾತ್ರ ಮುಂದಿನ ಪೀಳಿಗೆಗೆ ಸುಂಸ್ಕೃತರಾಗಲು ನಾವು ಹಾಗೂ ಕಲಾವಿದರು ಪ್ರಯತ್ನ ಮಾಡಬೇಕು. ಈ ನಿಟ್ಟಿನಲ್ಲಿ ಕಳೆದ 28 ವರ್ಷಗಳಿಂದ ಕಲಾ ಸೇವೆಯಲ್ಲಿ ಹಾಗೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಭರತಾಂಜಲಿಯ ಕಲಾ ಗುರುಗಳಾದ ಶ್ರೀಧರ ಹೊಳ್ಳ ಪ್ರತಿಮಾ ಶ್ರೀಧರ್ ದಂಪತಿಗಳು ಅಭಿನಂದನಾರ್ಹರು ಎಂದರು. 


ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ, ಪೊಳಲಿ, ಗಿರಿ ಪ್ರಕಾಶ್ ತಂತ್ರಿ, ನಾಟ್ಯ ಗುರು ಕಲಾಶ್ರೀ ಕಮಲಾ ಭಟ್  ಉಪಸ್ಥಿತರಿದ್ದರು. ಭರತಾಂಜಲಿಯ ನಿರ್ದೇಶಕ ಶ್ರೀಧರ ಹೊಳ್ಳ ಸ್ವಾಗತಿಸಿ, ನಿರ್ದೇಶಕಿ ವಿದುಷಿ ಪ್ರತಿಮಾ ಶ್ರೀಧರ್ ವಂದಿಸಿದರು.


ಕಾರ್ಯಕ್ರಮದಲ್ಲಿ ಸಹ ಶಿಕ್ಷಕಿಯರಾದ ವಿದುಷಿ ಪ್ರಕ್ಷಿಲಾ ಜೈನ್, ಮಾನಸ ಕುಲಾಲ್, ವಂದನಾರಾಣಿ ಮೊದಲಾದವರು ಉಪಸ್ಥಿತರಿದ್ದರು.


ಭರತಾಂಜಲಿ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನಗಳು ನಡೆದವು. ಹಿಮ್ಮೇಳದಲ್ಲಿ ಹಾಡುಗಾರಿಕೆಯಲ್ಲಿ ವಿದುಷಿ ವಂದನಾ ರಾಣಿ, ಮೃದಂಗದಲ್ಲಿ ವಿದ್ವಾನ್ ಬಾಲಚಂದ್ರ ಭಾಗವತ್, ವಯೋಲಿನ್‌ನಲ್ಲಿ ವಿದ್ವಾನ್ ಶ್ರೀಧರ ಆಚಾರ್ಯ ಉಡುಪಿ ಸಹಕರಿಸಿದರು. ನಟುವಾಂಗ ಮತ್ತು ನೃತ್ಯ ನಿರ್ದೇಶನ ಗುರು ವಿದುಷಿ ಪ್ರತಿಮಾ ಶ್ರೀಧರ್ ನೆರವೇರಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter  

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top