ಬ್ರಹ್ಮಾವರ: ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರದ ವತಿಯಿಂದ ಜಯಂಟ್ಸ್ ಫೆಡರೇಶನ್‌ನ ಮಾಜಿ ಅಧ್ಯಕ್ಷ ಮಧುಸೂಧನ್ ಹೇರೂರವರ ತಂದೆ ದಿ. ಸೀನ ಸುವರ್ಣರ ಸ್ಮರಣಾರ್ಥದ ಪ್ರಯುಕ್ತ ೫೨ ನೇ ಹೇರೂರು ಗ್ರಾಮದ ಅಂಗನವಾಡಿ ಮಕ್ಕಳಿಗೆ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಕೊಡೆಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಜಯಂಟ್ಸ್ ಬ್ರಹ್ಮಾವರದ ಅಧ್ಯಕ್ಷ ವಿವೇಕಾನಂದ ಕಾಮತ್, ಮಾಜಿ ಅಧ್ಯಕ್ಷ ಸುಂದರ್ ಪೂಜಾರಿ ಮೂಡು ಕುಕ್ಕಡೆ, ದಿನೇಶ್ ಸುವರ್ಣ, ಶ್ರೀಮತಿ ಸುನೀತಾ ಮಧುಸೂಧನ್, ಹಳೆಯ ವಿದ್ಯಾರ್ಥಿ ಸಂಘದ ಶ್ರೀ ಸದಾನಂದ ಪೂಜಾರಿ, ದತ್ತಾತ್ರೇಯ ಮಲ್ಯ, ಚಾಂತಾರು ಪಂಚಾಯತು ಮಾಜಿ ಅಧ್ಯಕ್ಷೆ ಶ್ರೀಮತಿ ಮೀರಾ ಸದಾನಂದ, ಮುಖ್ಯ ಶಿಕ್ಷಕಿ ಮಂಜುಳಾ ಹಾಗೂ ಶಿಕ್ಷಕಿಯರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ