ಪ್ರತಿ ಭಾಷೆಗೂ ತನ್ನದೇ ಆದ ಘನತೆ ಇದೆ: ಡಾ. ಪ್ರವೀಣ್ ಪದ್ಯಾಣ

Upayuktha
0

ಮಂಗಳೂರು: ನಮ್ಮ ಆಯ್ಕೆಯ ವಿಷಯ ಉದ್ಯೋಗಕ್ಕೆ ಕಾರಣವಲ್ಲ, ನಮ್ಮ ತಜ್ಞತೆ, ಕೌಶಲಗಳು ಉದ್ಯೋಗಕ್ಕೆ ಪೂರಕ. ಸಾಮರ್ಥ್ಯಗಳಿದ್ದರೆ ಮಾತ್ರ ಅವಕಾಶಗಳು ಬಾಗಿಲು ತೆರೆಯುತ್ತದೆ ಎಂದು  ಮಂಗಳೂರು ವಿಶ್ವವಿದ್ಯಾನಿಲಯದ ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ. ಧನಂಜಯ ಕುಂಬ್ಳೆ ಅಭಿಪ್ರಾಯಪಟ್ಟರು.


ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಗುರುವಾರ, ಐಕ್ಯೂಎಸಿ, ಕನ್ನಡ ಸಂಘ ಹಾಗೂ ಕನ್ನಡ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ವೃತ್ತಿ ಮಾರ್ಗದರ್ಶನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. 


ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಕಾಸರಗೋಡು ಪೆರಿಯಾ ಕೇಂದ್ರೀಯ ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕ ಡಾ| ಪ್ರವೀಣ್ ಪದ್ಯಾಣ,  ಪ್ರತಿಯೊಂದು ಭಾಷೆಗೂ ತನ್ನದೇ ಆದ ಇತಿಹಾಸ, ಘನತೆ ಇದೆ. ಐಚ್ಚಿಕ ಕನ್ನಡ ಎಂಬುದು ಕೇವಲವಲ್ಲ. ಈ ವಿಷಯಕ್ಕೂ ಅಗಾಧ ಅವಕಾಶಗಳಿವೆ, ಎಂದರು. 


ಡಾ| ಪ್ರವೀಣ್ ಪದ್ಯಾಣ ವಿದ್ಯಾರ್ಥಿಗಳಿಗೆ ಪದವಿ ನಂತರ ಶಿಕ್ಷಣ ಹಾಗೂ ಉದ್ಯೋಗ ಕ್ಷೇತ್ರದಲ್ಲಿರುವ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.


ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಮಾಧವ ಎಂ.ಕೆ ಸ್ವಾಗತಿಸಿ, ಕಾರ್ಯಕ್ರಮ ಸಂಯೋಜಕ ಮಧು ಬಿರಾದರ್ ವಂದಿಸಿದರು. ವಿದ್ಯಾರ್ಥಿನಿ ವಿಧಿಶ್ರೀ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter  

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top