ಮಂಗಳೂರು: ಸೂರಜ್ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಮೂಲಕ ಮುಡಿಪುವಿನಂತಹ ಗ್ರಾಮೀಣ ಪರಿಸರದಲ್ಲಿ ಬಡ ವಿದ್ಯಾರ್ಥಿಗಳಿಗಾಗಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ, ಅತೀ ಕಡಿಮೆ ಶುಲ್ಕದೊಂದಿಗೆ ಶಿಕ್ಷಣ ನೀಡುತ್ತಿರುವ ಡಾ. ಮಂಜುನಾಥ್ ಎಸ್. ರೇವಣ್ಕರ್ ಅವರಿಗೆ ಕೋಟಕ್ ವಿದ್ಯಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕುಮಟಾ ತಾಲೂಕಿನ ಹಿರೇಗುತ್ತಿಯಲ್ಲಿ ಶ್ರೀಪಾದಕೃಷ್ಣ ರೇವಣ್ಕರ್ ಮತ್ತು ಗುಲಾಬಿ ಕೃಷ್ಣ ರೇವಣ್ಕರ್ ದಂಪತಿಗಳ ಮಗನಾಗಿ 1966ರ ಜನವರಿ 1ರಂದು ಜನಿಸಿದ ಮಂಜುನಾಥ ರೇವಣ್ಕರ್ ಹುಟ್ಟೂರಲ್ಲೇ ಪ್ರಾಥಮಿಕ ಶೀಕ್ಷಣ ಪಡೆದರು. ಬಳಿಕ ಹುಬ್ಬಳ್ಳಿಯಲ್ಲಿ ಬಿ.ಇ ಸಿವಿಲ್ ಎಂಜಿನಿಯರಿಂಗ್ ಪದವಿ ಪಡೆದು ಬೆಂಗಳೂರಿನ ಇಸ್ರೋದಲ್ಲಿ ವೃತ್ತಿ ಜೀವನ ಆರಂಭಿಸಿದರು. ಕೆಲ ವರ್ಷಗಳ ಬಳಿಕ ಸ್ವಯಂ ನಿವೃತ್ತಿ ಪಡೆದು ಸೂರಜ್ ಬಿಲ್ಡರ್ಸ್ ಹೆಸರಿನಲ್ಲಿ ಸ್ವಂತ ಉದ್ಯಮ ಸ್ಥಾಪಿಸಿ ಮುನ್ನಡೆಸಿದರು. ಅನಂತರ ಶಿಕ್ಷಣ ಕ್ಷೇತ್ರಕ್ಕೆ ಕಾಲಿರಿಸಿ ಸೂರಜ್ ಸಮೂಹದ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ, ವಿಶೇಷವಾಗಿ ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನೇ ಆಯ್ದು ಅವರಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಿ ಪ್ರತಿಭಾವಂತರಾಗಿ ಬೆಳೆಸುವ ಕಾರ್ಯವನ್ನು ಡಾ. ಮಂಜುನಾಥ್ ರೇವಣ್ಕರ್ ಮಾಡುತ್ತಿದ್ದಾರೆ.
ಅವರ ಎಲ್ಲ ಸಾಧನೆಗಳನ್ನು ಗುರುತಿಸಿ ಕೋಟಕ್ ಲೈಫ್ ಇನ್ಸೂರೆನ್ಸ್ ಸಂಸ್ಥೆ ಅವರಿಗೆ ಕೋಟಕ್ ವಿದ್ಯಾ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ