ವ್ಯಾಪಕ ಮಳೆ: ದ.ಕ, ಉಡುಪಿ ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ

Upayuktha
0


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಗಾಳಿ ಸಹಿತ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಣೆಯಾಗಿರುವು ದರಿಂದ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಪದವಿ ಶಿಕ್ಷಣ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು. 25ರ ಮಂಗಳವಾರ ರಜೆ ಘೋಷಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಆದೇಶಿಸಿದ್ದಾರೆ.


ಮುಂಜಾಗ್ರತಾ ಕ್ರಮವಾಗಿ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸಬೇಕು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ, ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯ ಕೈಗೊಳ್ಳಬೇಕು, ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು ಮತ್ತು ಜಿಲ್ಲಾಧಿಕಾರಿ ಕಚೇರಿ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಪ್ರವಾಸಿಗರು, ಸಾರ್ವಜನಿಕರು ನದಿ, ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಪ್ರತಿ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿ ಇಟ್ಟುಕೊಳ್ಳುವಂತೆ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಡುಪಿಯಲ್ಲೂ ರಜೆ:

ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಆರೆಂಜ್ ಅಲರ್ಟ್ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:25.07.2023 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top