ಜಡಿಮಳೆ: ಶುಕ್ರವಾರವೂ (ಜು.7) ಶಾಲಾ-ಕಾಲೇಜುಗಳಿಗೆ ರಜೆ

Upayuktha
0

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ವ್ಯಾಪಕ ಮಳೆಯಾಗುವ ಕಾರಣ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು.7ರ ಶುಕ್ರವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ.


ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಕೈಗೊಂಡಿರುವ ತುರ್ತು ಕ್ರಮಗಳಿವು:

ಗ್ರಾಮೀಣ ಅಥವಾ ದೂರ ಪ್ರದೇಶಗಳಿಂದ ಬರುವ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಕಾಲೇಜಿಗೆ ಹಾಜರಾಗಲು ಅನಾನುಕೂಲವಾಗುವ ಸಂದರ್ಭಗಳಲ್ಲಿ ಆನ್ಲೈನ್ ಮೂಲಕ ತರಗತಿಗಳನ್ನು ನಡೆಸಲು ಸಂಬಂಧಿಸಿದ ವಿದ್ಯಾಸಂಸ್ಥೆಗಳು ಅವಕಾಶ ಕಲ್ಪಿಸಬಹುದಾಗಿದೆ.


ನೀರು ಇರುವ ತಗ್ಗು ಪ್ರದೇಶ ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸುವುದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ, ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯ ಕೈಗೊಳ್ಳಬೇಕು, ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.


ಪ್ರವಾಸಿಗರು, ಸಾರ್ವಜನಿಕರು ನದಿ, ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಪ್ರತಿ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳುವುದು.


ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಕಂಟ್ರೋಲ್ ರೂಂ 1077 ಹಾಗೂ ದೂರವಾಣಿ: 0824- 2442590‌ ಸಂಪರ್ಕಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter  

Post a Comment

0 Comments
Post a Comment (0)
To Top