ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ವಿಶ್ವದ ಪ್ರಬಲ ದೇಶವಾದ ಭಾರತ: ಶಾಸಕ ವೇದವ್ಯಾಸ ಕಾಮತ್

Upayuktha
0

ಮಂಗಳೂರು: ಭಾರತವು ಜಗತ್ತಿನ ಶಕ್ತಿಶಾಲಿ ದೇಶವಾಗಿ ಬೆಳೆಯಲು ಸದೃಢ ನಾಯಕತ್ವ ಕಾರಣವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತವು ವಿಶ್ವದ ಪ್ರಬಲ ದೇಶವಾಗಿ ಗುರುತಿಸಿಕೊಂಡಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.


ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಯಶಸ್ವಿಯಾಗಿ 9 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿರುವ ಸಂಪರ್ಕ್ ಸೇ ಸಮರ್ಥನ್ ಅಭಿಯಾನದ ಅಂಗವಾಗಿ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಮಂಡಲ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಪ್ರಮುಖರು ಅಶೋಕನಗರದ ಉದ್ಯಮಿಗಳಾದ ಸೀತಾರಾಮ್ ಭಟ್ ಅವರ ಮನೆಗೆ ಭೇಟಿ ನೀಡಿ  ಕೇಂದ್ರ ಸರಕಾರದ ಸಾಧನೆಗಳ ಕಿರು ಹೊತ್ತಿಗೆಯನ್ನು ನೀಡಿದರು‌. 


ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಜಗತ್ತಿನ ಬಡ ರಾಷ್ಟ್ರ ಪರಿಹಾಸ್ಯ ಮಾಡುತ್ತಿದ್ದವರು ಇಂದು ಭಾರತದ ನಾಯಕತ್ವವನ್ನು ಒಪ್ಪಿಕೊಳ್ಳುತ್ತಿದ್ದಾರೆ. 9 ವರ್ಷಗಳಲ್ಲಿ ಭಾರತೀಯರು ಹೆಮ್ಮೆ ಪಡುವಂತೆ ದೇಶವನ್ನು ಅಭಿವೃದ್ಧಿಪಡಿಸಿದ ನರೇಂದ್ರ ಮೋದಿ ಅವರನ್ನು ಗೆಲ್ಲಿಸಲು ಕೈ ಜೋಡಿಸುವಂತೆ ಕೇಳಿಕೊಂಡರು.


ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಗಣೇಶ್ ಕುಲಾಲ್, ಬಿಜೆಪಿ ಮುಖಂಡರಾದ ನಿತಿನ್ ಕುಮಾರ್, ರೂಪಾ ಡಿ. ಬಂಗೇರ, ರಮೇಶ್ ಹೆಗ್ಡೆ, ಗುರುಚರಣ್, ನಿಲೇಶ್ ಕಾಮತ್, ಅರುಣ್ ಉರ್ವ, ಸಾಯಿ ಪ್ರಸಾದ್ ಶೆಟ್ಟಿ, ರಜತ್ ಕುಲಾಲ್ ಮುಂತಾದವರು ಉಪಸ್ಥಿತರಿದ್ದರು .


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top