ಉದ್ಯೋಗದ ಜೊತೆ ಅಧ್ಯಯನಕ್ಕೆ ಉತ್ತಮ ಅವಕಾಶ: ಆಳ್ವಾಸ್‍ನಲ್ಲಿ ಕರಾಮುವಿ ಕೇಂದ್ರ

Upayuktha
0

ವಿದ್ಯಾಗಿರಿ (ಮೂಡುಬಿದಿರೆ): ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಆಳ್ವಾಸ್ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ(ಕ.ರಾ.ಮು.ವಿ)ದ ಸುಸಜ್ಜಿತ ಕಲಿಕಾರ್ಥಿ ಸಹಾಯ ಕೇಂದ್ರ ಸ್ಥಾಪನೆಗೊಂಡಿದ್ದು, ವಿವಿಧ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಪ್ರವೇಶಾತಿ ಆರಂಭಗೊಂಡಿದೆ. 


ಆಳ್ವಾಸ್‍ನಲ್ಲಿ ಪರೀಕ್ಷಾ ಕೇಂದ್ರವನ್ನೂ ಹೊಂದಿರುವ ಕಾರಣ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲ ಲಭ್ಯವಾಗಿದೆ. 


ಔದ್ಯೋಗಿಕ ನೆಲೆಯಲ್ಲಿ ಸ್ನಾತಕೋತ್ತರ, ಪದವಿ, ಒಂದು ವರ್ಷದ ಡಿಪ್ಲೊಮಾ ಹಾಗೂ ಆರು ತಿಂಗಳ ಸರ್ಟಿಫಿಕೇಟ್ ಕೋರ್ಸ್‍ಗಳನ್ನು ವಿವಿಧ ವಿಷಯಗಳಲ್ಲಿ ಮಾಡಲು ಅವಕಾಶವಿದ್ದು, ಉದ್ಯೋಗ ಮಾಡಿಕೊಂಡು ಕೋರ್ಸ್ ಮಾಡಲು ಸುವರ್ಣಾವಕಾಶ ದೊರೆತಿದೆ. 


ಬಿಪಿಎಲ್ ಕುಟುಂಬದ ಮಹಿಳಾ ವಿದ್ಯಾರ್ಥಿಗಳು (ಶೇ 15), ಆಟೊ, ಕ್ಯಾಬ್ ಚಾಲಕರು ಮತ್ತು ಅವರ ಮಕ್ಕಳು (ಶೇ25), ಮಾಜಿ ಸೈನಿಕರು ಮತ್ತು ಅವರ ಮಕ್ಕಳಿಗೆ (ಶೇ 15), ಕೆಎಸ್‍ಆರ್‍ಟಿಸಿ, ಬಿಎಂಟಿಸಿ, ಎನ್‍ಡಬ್ಲ್ಯೂಕೆಆರ್‍ಟಿಸಿ ಹಾಗೂ ಕೆಕೆಆರ್‍ಟಿಸಿ ನೌಕರರ ಮಕ್ಕಳು (ಶೇ25) ಶುಲ್ಕ ವಿನಾಯಿತಿ ಪಡೆಯಬಹುದು. 


ಕೋವಿಡ್-19ನಿಂದ ಮೃತರಾದ ಪೋಷಕರ ಮಕ್ಕಳು, ಲಿಂಗತ್ವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು, ಅಂಧ ವಿದ್ಯಾರ್ಥಿಗಳು, ಎಸ್‍ಸಿ, ಎಸ್‍ಟಿ, ಒಬಿಸಿ ವಿದ್ಯಾರ್ಥಿಗಳು ಸರ್ಕಾರದ ಎಸ್‍ಎಸ್‍ಪಿ ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಿ ವಿದ್ಯಾರ್ಥಿ ವೇತನ ಪಡೆಯಬಹುದು. 


ಹೆಚ್ಚಿನ ಮಾಹಿತಿಗೆ administration@alvas.org , ಮೊ.7090715010 ಅಥವಾ 9591546202, ಇಮೇಲ್ ao@alvascollege.com  ಸಂಪರ್ಕಿಸಬಹುದು.  

 

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter  

Post a Comment

0 Comments
Post a Comment (0)
To Top