ಯೋಧರ ನಾಡು ಕೊಡಗಿನ ಮಡಿಕೇರಿಯಲ್ಲಿ ಕಾರ್ಗಿಲ್ ವಿಜಯ್ ದಿವಸ್, ರಕ್ತದಾನ ಶಿಬಿರ

Chandrashekhara Kulamarva
0

ಮಡಿಕೇರಿ: ಹಿಂದು ಜಾಗರಣ ವೇದಿಕೆ ಕೊಡಗು ಜಿಲ್ಲೆ ಇವರ ನೇತೃತ್ವದ‌ಲ್ಲಿ ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಯ ಯುದ್ಧ ಸ್ಮಾರಕದಲ್ಲಿ ಬುಧವಾರ (ಜು.26) ಬೆಳಿಗ್ಗೆ 9 ಗಂಟೆಗೆ 1999 ರ ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನವನ್ನು ಬಗ್ಗುಬಡಿದು ವಿಜಯ ಪತಾಕೆ ಹಾರಿಸಿದ್ದ ನಮ್ಮ ಸೈನಿಕರ ತ್ಯಾಗ ಬಲಿದಾನ ಶೌರ್ಯಗಳನ್ನು ಗೌರವಿಸುವ ಸಲುವಾಗಿ ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮ ನಡೆಯಿತು.


ಈ ಪ್ರಯುಕ್ತ ಬೆಳಿಗ್ಗೆ 11 ಗಂಟೆಗೆ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದಲ್ಲಿ ಪರಿವರ್ತನಾ ಟ್ರಸ್ಟ್ (ರಿ) ಬೆಂಗಳೂರು ಹಾಗೂ ಬ್ಲಡ್ ಬ್ಯಾಂಕ್ ಮಡಿಕೇರಿ ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರ ನಡೆಯಿತು‌. ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ನಿವೃತ್ತ ಮೇಜರ್  ಬಿದ್ದಂಡ ನಂಜಪ್ಪ  ಹಾಗೂ ಕಾರ್ಯಕ್ರಮದ ದಿಕ್ಸೂಚಿ ಭಾಷಣಕಾರರಾಗಿ ಹಿಂದು ಜಾಗರಣ ವೇದಿಕೆಯ ಪ್ರಾಂತ ಕಾರ್ಯಕಾರಿಣಿ ಸದಸ್ಯರಾದ ಕೆ.ಟಿ. ಉಲ್ಲಾಸ್ ರವರು ಆಗಮಿಸಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

Post a Comment

0 Comments
Post a Comment (0)
To Top