ಮಂಗಳೂರು: ದಿನಾಂಕ 6/07/2023 ನೆ ಗುರುವಾರ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕದ ಕಾರ್ಯಕಾರಿ ಸಮಿತಿಯ ಸಭೆ ಶಾರದಾ ವಿದ್ಯಾಲಯದಲ್ಲಿ ನಡೆಯಿತು.
ಘಟಕದ ಅಧ್ಯಕ್ಷ ಡಾ.ಮಂಜುನಾಥ್ ಎಸ್. ರೇವಣಕರರವರು ಅಧ್ಯಕ್ಷತೆ ವಹಿಸಿದ್ದರು. ಶ್ರೀಮತಿ ರತ್ನಾವತಿ ಜೆ. ಬೈಕಾಡಿಯವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಗೌರವ ಕಾರ್ಯದರ್ಶಿ ಎನ್.ಗಣೇಶ್ ಪ್ರಸಾದ್ ಜೀ ಸ್ವಾಗತಿಸಿ ವರದಿ ವಾಚಿಸಿದರು. ಗೌರವ ಕೋಶಾಧಿಕಾರಿ ಶ್ರೀ ಸುಬ್ರಾಯ ಭಟ್ ಲೆಕ್ಕಪತ್ರ ಮಂಡಿಸಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಶ್ರೀ ರಘು ಇಡ್ಕಿದು, ಡಾ.ಶ್ರೀಕೃಷ್ಣ ಭಟ್ಟ ಸುಣ್ಣಂಗುಳಿ, ಶ್ರೀ ಬಿ.ಕೃಷ್ಣಪ್ಪ ನಾಯ್ಕ್, ಶ್ರೀ ಮುರಳೀಧರ ಭಾರದ್ವಾಜ್ ಸಲಹೆ ಸೂಚನೆ ನೀಡಿದ್ದರು. ಮುಂದಿನ ದಿನಗಳಲ್ಲಿ ಇನ್ನಷ್ಟು ಸಾಹಿತ್ಯ ಚಟುವಟಿಕೆಗಳನ್ನು ಸಂಘಟಿಸಿ ಭಾಗವಹಿಸಲು ಸರ್ವ ಸದಸ್ಯರು ನಿರ್ಧರಿಸಿದರು. ಇನ್ನೋರ್ವ ಗೌರವ ಕಾರ್ಯದರ್ಶಿ ಡಾ.ಮುರಳಿ ಮೋಹನ್ ಚೂಂತಾರು ಇವರು ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ