ಮಂಗಳೂರು: ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಭಾನುವಾರ (ಜು.9) ಶ್ರೀ ಧಾಮ ಮಾಣಿಲದ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ದೃಢ ಕಲಶಾಭಿಷೇಕ ನಡೆಯಲಿದೆ.
ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ಬ್ರಹ್ಮಶ್ರೀ ಅನಂತ ಉಪಾಧ್ಯಾಯರು ಕಾರ್ಯಕ್ರಮದ ನೇತೃತ್ವ ವಹಿಸಲಿದ್ದಾರೆ.
ಬೆಳಗ್ಗೆ 8ರಿಂದ ಗಣಪತಿ ಸಾನಿಧ್ಯದಲ್ಲಿ ಗಣಹೋಮ, ನವಕ, ಪ್ರಧಾನ ಹೋಮ, ಶ್ರೀ ದೇವರಿಗೆ 49 ಕಲಶಾಧಿವಾಸ, ಭಾಗವತ ಉದ್ಯಾಪನಾ ಹೋಮ, ಕಲಶಾಭಿಷೇಕ, ಮಹಾಪೂಜೆ, ಅನ್ನ ಸಂತರ್ಪಣೆ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ- ನೃತ್ಯ ವೈಭವ, ಸಂಜೆ 3ರಿಂದ ಸಭಾ ಕಾರ್ಯಕ್ರಮ, 5:30ರಿಂದ ಭಾಗವತಕಥಾ ಸಮಾರೋಪ ನಡೆಯಲಿದೆ.
ರಾತ್ರಿ 7ರಿಂದ ಶ್ರೀ ಮಹಾಗಣಪತಿ ಮತ್ತು ಶ್ರೀ ವೀರನಾರಾಯಣ ದೇವರಿಗೆ ಸಣ್ಣ ರಂಗಪೂಜೆ, ಮಂಗಳ ಮಂತ್ರಾಕ್ಷತೆ, ಭಾಗವತ ವಿಶೇಷ ಪ್ರಸಾದ ವಿತರಣೆ ನಡೆಯಲಿದೆ.
ಸಂಜೆ 3ರಿಂದ 5ರ ವರೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಪರಮಪೂಜ್ಯ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರ ಗೌರವ ಉಪಸ್ಥಿತಿ ಇರುತ್ತದೆ. ಕೇಮಾರು ಶ್ರೀ ಸಾಂದೀಪನಿ ಸಾಧನಾಶ್ರಮದ ಪರಮಪೂಜ್ಯ ಶ್ರೀ ಶ್ರೀ ಈಶ ವಿಠಲದಾಸ ಸ್ವಾಮೀಜಿ ಅವರಿಂದ ಆಶೀರ್ವಚನ ನಡೆಯಲಿದೆ. ದ.ಕ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಎಂಆರ್‍ಜಿ ಗ್ರೂಪ್ ಆಡಳಿತ ನಿರ್ದೇಶಕ ಕೆ. ಪ್ರಕಾಶ್ ಶೆಟ್ಟಿ, ಮುಂಬಯಿ-ದುಬೈಗಳಲ್ಲಿ ಪುರೋಹಿತರು ಮತ್ತು ಜ್ಯೋತಿಷಿಗಳಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ಎಂ.ಜೆ ಪ್ರವೀಣ್ ಭಟ್, ಮುಂಬೈ ಬಂಟರ ಸಂಘದ ಕ್ರೀಡಾ ಸಮಿತಿ ಕಾರ್ಯಾಧ್ಯಕ್ಷ ಗಿರೀಶ್ ಆರ್ ಶೆಟ್ಟಿ ತೆಳ್ಳಾರ್, ಕುಳಾಯಿಯ ಗುಹಾನ್ ಅಸೋಸಿಯೇಟ್ಸ್‌ನ ಆಡಳಿತ ನಿರ್ದೇಶಕ ನವೀನ್ ಕುಲಾಲ್ ಹೊಸಬೆಟ್ಟು, ವೈದ್ಧಿ ಎಜುಲೇಶನ್ ಟ್ರಸ್ಟ್‌ನ ಚೆಯರ್ಮೆನ್ ಸಂದೀಪ್ ಎಸ್.ಪಿ, ವಿಶ್ವನಾಥ್ ಎನ್ ಉಡುಪಿ, ಶಾಂಭಾಶಿವರಾಮ್ ನಡೆಲ್ಲಾ, ಸತ್ಯವಾಣಿ ನಡೆಲ್ಲಾ ಮುಖ್ಯ ಅತಿಥಿಗಳಾಗಿ ಭಾಗವಹಿಸುತ್ತಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ