ಮಾನಸಿಕ ಆರೋಗ್ಯ ಕಾಳಜಿ ಕಾಯ್ದೆ-2017 ಮತ್ತು ವಿಕಲಾಂಗಚೇತನರ ಹಕ್ಕುಗಳ ಕಾಯ್ದೆ-2016 ರ ಕುರಿತು ಕಾರ್ಯಗಾರ
ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಹಾಗೂ ಜಿಲ್ಲಾ ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಮಾನಸಿಕ ಆರೋಗ್ಯ ಕಾಳಜಿ ಕಾಯ್ದೆ-2017 ಮತ್ತು ವಿಕಲಾಂಗಚೇತನರ ಹಕ್ಕುಗಳ ಕಾಯ್ದೆ-2016ರ ಕುರಿತು ಇದೇ ಜು.5ರ ಬುಧವಾರ ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳೂ ಆಗಿರುವ ಹಿರಿಯ ನ್ಯಾಯಾಧೀಶರಾದ ಶೋಭಾ ಬಿ.ಜಿ. ಅವರು ಕಾರ್ಯಕ್ರಮ ಉದ್ಘಾಟಿಸುವರು.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ. ಅವರು ಘನ ಉಪಸ್ಥಿತಿವಹಿಸುವರು.
ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಆರೋಗ್ಯ ಸೌಧದ ಮಾನಸಿಕ ಆರೋಗ್ಯ ವಿಭಾಗದ ಉಪನಿರ್ದೇಶಕ ಡಾ. ರಜನಿ ಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕಿಶೋರ್ ಕುಮಾರ್ ಎಂ, ವಕೀಲರ ಸಂಘದ ಅಧ್ಯಕ್ಷ ಪೃಥ್ವಿರಾಜ್ ರೈ. ಕೆ, ಮಂಗಳೂರು ತಾಲೂಕು ಆರೋಗ್ಯ ಅಧಿಕಾರಿ ಡಾ. ಸುಜಯ್ ಭಂಡಾರಿ ಭಾಗವಹಿಸುವರು.
ಸಂಪನ್ಮೂಲ ವ್ಯಕ್ತಿಗಳಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪಾನೆಲ್ ಅಡ್ವೊಕೇಟ್ ಪ್ರತಿಮ ಎಸ್ ಹಾಗೂ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನೋರೋಗ ತಜ್ಞ ಡಾ. ಸುಪ್ರೀತಾ ಭಾಗವಹಿಸುವರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ