ಮಂಗಳೂರು: ಕರ್ನಾಟಕ ವಿಧಾನಸಭೆ ಅಧಿವೇಶನದ ವಾರಾಂತ್ಯದ ಬಿಡುವಿನ ದಿನ ಶನಿವಾರ ಸಭಾಧ್ಯಕ್ಷ ಯು ಟಿ ಖಾದರ್ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಿ ಅಹವಾಲು ಸ್ವೀಕರಿಸಿ ಕ್ಷೇತ್ರ ಸಂಚಾರ ನಡೆಸಿದರು.
ಕರ್ನಾಟಕ 16ನೆಯ ವಿಧಾನಸಭೆಯ ಅಧಿವೇಶನವು ಜುಲೈ 3ರಂದು ಪ್ರಾರಂಭವಾಗಿದ್ದು, ಯು.ಟಿ ಖಾದರ್ ಸಭಾಧ್ಯಕ್ಷರಾದ ಬಳಿಕ ಪೂರ್ಣ ಪ್ರಮಾಣದ ಮೊದಲ ಅಧಿವೇಶನ ನಡೆಯುತ್ತಿದೆ.
ಮೊದಲ ವಾರದ ಅಧಿವೇಶನದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರು ಬಜೆಟ್ ಮಂಡನೆ ನಡೆಸಿದ್ದು ಇಂದು ಮತ್ತು ನಾಳೆ ವಾರಾಂತ್ಯದ ಬಿಡುವು ನೀಡಲಾಗಿದೆ,ಈ ಮದ್ಯೆ ಸಭಾಧ್ಯಕ್ಷ ಯು ಟಿ ಖಾದರ್ ಕ್ಷೇತ್ರಕ್ಕೆ ಆಗಮಿಸಿದ್ದು ಸಾರ್ವಜನಿಕರ ಭೇಟಿಯಲ್ಲಿ ನಿರತರಾಗಿದ್ದಾರೆ.
ಬೆಳಗ್ಗಿನಿಂದಲೇ ಮಂಗಳೂರು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ ನಂತರ ಕ್ಷೇತ್ರದ ವಿವಿಧ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ನಂತರ ಉಳ್ಳಾಲ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಬಳಿಕ ಕ್ಷೇತ್ರದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ