ಮಂಗಳೂರು: ತುಳುನಾಡಿನ ವಾಸ್ತುಶಿಲ್ಪಗಳ ಬಗ್ಗೆ ಅಧ್ಯಯನ ನಡೆಸಲು ಸಾಕಷ್ಟು ಸಂಶೋಧನಾ ಪರಿಕರಗಳು ಲಭ್ಯ ಇಲ್ಲದೇ ಇರುವುದೇ ಪ್ರಮುಖ ಕಾರಣ. ಈ ನಿಟ್ಟಿನಲ್ಲಿ ತುಳುನಾಡಿನ ವಾಸ್ತುಶಿಲ್ಪದ ಬಗ್ಗೆ ಅಧ್ಯಯನ ನಡೆಯಬೇಕಿದೆ, ಎಂದು ಇತಿಹಾಸ ತಜ್ಞ ಪುಂಡಿಕಾಯಿ ಗಣಪಯ್ಯಭಟ್ ಹೇಳಿದರು.
ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಮಂಗಳವಾರ ಸ್ನಾತಕೋತ್ತರ ಇತಿಹಾಸ ಮತ್ತು ಪುರಾತತ್ವಶಾಸ್ತ್ರ ವಿಭಾಗ, ಸ್ನಾತಕ ಇತಿಹಾಸವಿಭಾಗಗಳ ವತಿಯಿಂದ ಐಕ್ಯೂಎಸಿ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ "ತುಳುನಾಡಿನ ಕಲೆ ಮತ್ತು ವಾಸ್ತುಶಿಲ್ಪ" ಎಂಬ ಬಗ್ಗೆ ವಿಶೇಷ ಉಪನ್ಯಾಸ ನೀಡಿದ ಅವರು, ತುಳುನಾಡಿನಲ್ಲಿ ಸುಮಾರು 4000ಕ್ಕೂ ಹೆಚ್ಚು ದೇವಸ್ಥಾನಗಳಿವೆ. ಇವುಗಳಲ್ಲಿ ಹೆಚ್ಚಿನವುಗಳು ರಾಜರಿಂದ ನಿರ್ಮಿತವಾದವುಗಳಲ್ಲ. ಬದಲಾಗಿ ಜನರಿಂದ ನಿರ್ಮಿತವಾದವುಗಳು. ಹಾಗಾಗಿ ಅವುಗಳ ನಿರ್ದಿಷ್ಟ ಕಾಲಮಾನವನ್ನು ಅಳೆಯುವುದು ಕಷ್ಟವಾಗುತ್ತದೆ ಎಂದು ನುಡಿದರು.
'ಗುಪ್ತರ ಯುಗ: ಐತಿಹಾಸಿಕ ಸಮೀಕ್ಷೆ' ಈ ವಿಷಯದ ಕುರಿತು ಉಪನ್ಯಾಸ ನೀಡಿದ ಮಂಗಳೂರು ವಿಶ್ವವಿದ್ಯಾನಿಲಯ ನಿವೃತ್ತ ಇತಿಹಾಸ ಪ್ರಾಧ್ಯಾಪಕ ಡಾ. ಲೋಕೇಶ್, ಇತಿಹಾಸವನ್ನು ವಿವಿಧ ದೃಷ್ಟಿಕೋನಗಳಿಂದ ನೋಡಬೇಕು. ಆಗ ನಮ್ಮ ಇತಿಹಾಸ ಜ್ಞಾನ ವಿಶಾಲವಾಗುತ್ತದೆ, ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇತಿಹಾಸವಿಭಾಗದ ಮುಖ್ಯಸ್ಥ ಡಾ. ಜಯರಾಜ್ ಎನ್, ಸ್ನಾತಕೋತ್ತರ ಇತಿಹಾಸ ಮತ್ತು ಪುರಾತತ್ವಶಾಸ್ತ್ರ ವಿಭಾಗದ ಸಂಯೋಜಕಿ ಡಾ. ಮೀನಾಕ್ಷಿ ಎಂ.ಎಂ, ಇತಿಹಾಸ ಪ್ರಾಧ್ಯಾಪಕ ಡಾ. ಗಣಪತಿಗೌಡ, ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ