ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಂಸ್ಥಾಪಕ ಡಿ. ರತ್ನವರ್ಮ ಹೆಗ್ಗಡೆ ಸ್ಮಾರಕ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆಯು ಜುಲೈ 5ರಂದು ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ನಡೆಯಲಿದೆ.
ಮೂಡುಬಿದಿರೆಯ ಎಕ್ಸಲೆಂಟ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ನಿರ್ದೇಶಕ ಡಾ. ಬಿ. ಪಿ. ಸಂಪತ್ ಕುಮಾರ ಅವರು ಬೆಳಗ್ಗೆ 9.30ಕ್ಕೆ ಉದ್ಘಾಟನೆ ನೆರವೇರಿಸಲಿದ್ದಾರೆ. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಎ. ಕುಮಾರ ಹೆಗ್ಡೆ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ