ಮಂಗಳೂರು ವಿವಿ: ನೂತನ ಕುಲಸಚಿವರಾಗಿ ಮೊಹಮ್ಮದ್ ನಯೀಮ್ ಮೊಮಿನ್ ಅಧಿಕಾರ ಸ್ವೀಕಾರ

Upayuktha
0

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 17ನೇ ಕುಲಸಚಿವ (ಆಡಳಿತ) ರಾಗಿ ಕೆ.ಎ.ಎಸ್ ಅಧಿಕಾರಿ (ಹಿರಿಯ ಶ್ರೇಣಿ) ಮೊಹಮ್ಮದ್ ನಯೀಮ್ ಮೊಮಿನ್ ಅವರು ಮಂಗಳವಾರ ಬೆಳಗ್ಗೆ ಅಧಿಕಾರ ವಹಿಸಿಕೊಂಡಿದ್ದಾರೆ.  


ಮೂಲತಃ ಬಾಗಲಕೋಟೆ ಜಿಲ್ಲೆಯವರಾದ ಇವರು, ಬೀದರ್ ಮತ್ತು ಹಾಸನ ಜಿಲ್ಲೆಗಳಲ್ಲಿ ಸಹಾಯಕ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೆ ವಿಧಾನ ಸೌಧದಲ್ಲಿ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಏಪ್ರಿಲ್, 2021 ರಿಂದ ಕುಲಸಚಿವರಾಗಿದ್ದ ಡಾ. ಕಿಶೋರ್ ಕುಮಾರ್ ಸಿ. ಕೆ ನೂತನ ಕುಲಸಚಿವರಿಗೆ ಅಧಿಕಾರ ಹಸ್ತಾಂತರಿಸಿದರು. 


ಕುಲಪತಿ ಪ್ರೊ. ಜಯರಾಜ್ ಅಮೀನ್, ಕುಲಸಚಿವ (ಪರೀಕ್ಷಾಂಗ) ಡಾ. ರಾಜು ಕೃಷ್ಣ ಚಲನ್ನವರ್, ಹಣಕಾಸು ಅಧಿಕಾರಿ ಡಾ. ಸಂಗಪ್ಪ ವೈ, ವಿವಿಧ ನಿಕಾಯಗಳ ಡೀನರುಗಳು, ವಿಭಾಗ ಮುಖ್ಯಸ್ಥರುಗಳು ನೂತನ ಕುಲಸಚಿವರಿಗೆ ಅಭಿನಂದನೆ ಸಲ್ಲಿಸಿದರು. ಡಾ. ಕಿಶೋರ್ ಕುಮಾರ್ ಸಿ.ಕೆ ಅವರು ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾಗಿ ಮುಂದುವರಿಯಲಿದ್ದಾರೆ, ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಪ್ರಕಟಣೆ ತಿಳಿಸಿದೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top