ಮಂಗಳೂರು: ಹಿರಿಯರ ಮಾತನ್ನು ಗೌರವಿಸಿ ಗುರುವಿನ ಮಾರ್ಗದರ್ಶನದಂತೆ ಬದುಕಿದರೆ ಸಾಧನೆ ಸಾಧ್ಯ, ಎಂದು ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರಕ್ಷಕ- ಶಿಕ್ಷಕ ಸಂಘದ ಕಾರ್ಯಾಧ್ಯಕ್ಷೆ ಮೈತ್ರೇಯಿ ಅಭಿಪ್ರಾಯಪಟ್ಟರು. ಅವರು ಕಾಲೇಜಿನ ರವೀಂದ್ರಕಲಾಭವನದಲ್ಲಿ ಗುರುವಾರ ನಡೆದ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳ ವಿದಾಯಕೂಟದಲ್ಲಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡ ಕಾಲೇಜಿಜಿನ ಪ್ರಾಂಶುಪಾಲೆ ಡಾ. ಅನಸೂಯರೈ ಅವರು ಮಾತನಾಡಿ, ನಮ್ಮಿಂದ ಹೊರಹೋಗುವ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಜಗತ್ತಿನಲ್ಲಿ ಎಲ್ಲಾ ರಂಗದಲ್ಲೂ ಸಾಧನೆಯನ್ನು ಮಾಡುವಂತಾಗಲಿ, ಎಂದು ಆಶಿಸಿದರು. ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದ ಸವಿಅನುಭವವನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ವಿಜ್ಞಾನ, ಕಲಾ, ಹಾಗೂ ವಾಣಿಜ್ಯ ನಿಕಾಯದ ಸಲಹೆಗಾರರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು.
ರಕ್ಷಕ-ಶಿಕ್ಷಕ ಸಂಘದ ಕಾರ್ಯದರ್ಶಿ ಹಾಗೂ ಭೌತಶಾಸ್ತ್ರವಿಭಾಗದ ಮುಖ್ಯಸ್ಥೆ ಅರುಣಾಕುಮಾರಿ ಸ್ವಾಗತಿಸಿದರು. ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ. ಕುಮಾರಸುಬ್ರಹ್ಮಣ್‌ಗ ಭಟ್ ವಂದಿಸಿದರು. ಗಣಕವಿಜ್ಞಾನ ವಿಭಾಗದ ಡಾ. ಭಾರತಿಪಿಲಾ ರ್ಕಾರ್ಯಕ್ರಮವನ್ನು ನಿರೂಪಿಸಿದರು. ವಿದ್ಯಾರ್ಥಿಸಂಘದ ಉಪನಿರ್ದೇಶಕಿ ಪ್ರೊ. ಲತಾಎನ್ ಪಂಡಿತ್, ವಾಣಿಜ್ಯವಿಭಾಗದ ಮುಖ್ಯಸ್ಥೆ ಡಾ. ಸುಧಾಎನ್ ವೈದ್ಯ, ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಉಷಾ ಕೆಎಂ, ಕಾಲೇಜಿನ ಬೋಧಕ- ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಜರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ